ಶುಲ್ಕ ಮರು ಪಾವತಿಗೆ ಅರ್ಜಿ ಆಹ್ವಾನ…!!!

ಶುಲ್ಕ ಮರು ಪಾವತಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ  ಅಕ್ಟೋಬರ್07:
ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ಪಡೆದ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ ಭಾರತ ಸರ್ಕಾರದಿಂದ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕ ಮರುಪಾವತಿಸಲು ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 28 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಜಿ ಸಲ್ಲಿಸುವ ಅರ್ಹ ಕ್ರೀಡಾಪಟುಗಳು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರ್ಜಿ ಪಡೆದು ಭರ್ತಿ ಮಾಡಿ, ಅಕ್ಟೋಬರ್ 28ರ ಒಳಗಾಗಿ ಸಲ್ಲಿಸಬೇಕು ಎಂದು  ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ…

ವರದಿ.ಶಶಿಕುಮಾರ್ ಚಳ್ಳಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend