ಬಳ್ಳಾರಿಯಲ್ಲಿ ಸಂಭ್ರಮದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ…!!!

ಬಳ್ಳಾರಿಯಲ್ಲಿ ಸಂಭ್ರಮದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ
ಬಳ್ಳಾರಿ,ಅ.: ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ನಲ್ಲಚೆರುವು ಹತ್ತಿರದ ವಾಲ್ಮೀಕಿ ಭವನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಅವರ ಪುತ್ಥಳಿಗೆ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಅವರು ಮಾಲಾರ್ಪಣೆ ಹಾಗೂ ಪುಷ್ಪರ್ಚಾನೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೋಲೀಸ್ ವರಿಷ್ಟಧಿಕಾರಿಗಳಾದ ರಂಜಿತ್ ಕುಮಾರ್, ಸಹಾಯಕ ಆಯುಕ್ತರಾದ ಡಾ.ಆಕಾಶ ಶಂಕರ್, ಮಹಾನಗರ ಪಾಲಿಕೆಯ ಆಯುಕ್ತ ರುದ್ರೇಶ್, ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಮಣ್ಣ ಇದ್ದರು.
ನಂತರದ ವೇದಿಕೆ ಕಾರ್ಯಕ್ರಮವನ್ನು ಮಹಾನಗರ ಪಾಲಿಕೆಯ ಮೇಯರ್ ಎಂ.ರಾಜೇಶ್ವರಿ ಅವರು ಉದ್ಘಾಟಿಸಿ ಮಾತನಾಡಿದರು.
ಬಳ್ಳಾರಿ ಗ್ರಾಮೀಣ ಶಾಸಕರಾದ ಬಿ.ನಾಗೇಂದ್ರ ಅವರು ಅಧ್ಯಕ್ಷತೆ ವಹಿಸಿದರು.
ಚಿತ್ರದುರ್ಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕರಾದ ಕರಿಯಪ್ಪ ಮಾಳಗಿ ಅವರು ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವದ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಜಯಂತ್ಯೋತ್ಸವದ ಮೆರವಣಿಗೆಯಲ್ಲಿ ವಿವಿಧ ಸಾಂಸ್ಕøತಿಕ ಕಲಾತಂಡಗಳು ಹಾಗೂ ವೇದಿಕೆಯಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳು ಗಮನಸೆಳೆದವು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗುತ್ತಿಗನೂರು ವಿರೂಪಾಕ್ಷಗೌಡ, ಜಿಪಂ ಸಿಇಒ ಲಿಂಗಮೂರ್ತಿ, ಸಹಾಯಕ ಆಯುಕ್ತರಾದ ಡಾ.ಆಕಾಶ್ ಶಂಕರ್, ಎಡಿಸಿ ಮಂಜುನಾಥ, ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ್, ತಹಶೀಲ್ದಾರ್ ವಿಶ್ವನಾಥ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಕೀನಾ ಅವರು ಸೇರಿದಂತೆ ಮಹಾನಗರ ಪಾಲಿಕೆಯ ಸದಸ್ಯರು ಹಾಗೂ ವಾಲ್ಮೀಕಿ ಸಮುದಾಯದ ಮುಖಂಡರು ಮತ್ತು ಇನ್ನೀತರು ಉಪಸ್ಥಿತರಿದ್ದರು.

ವರದಿ. ವಿರೇಶ್. ಸಿರಿಗುಪ್ಪ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend