ರಾಜವೀರ ಮದಕರಿನಾಯಕ ಪ್ರತಿಮೆ ಅನಾವರಣ ಕಾರ್ಯಕ್ರಮ ತಾತ್ಕಾಲಿಕವಾಗಿ ಮುಂದೂಡಿಕೆ…!!!

ರಾಜವೀರ ಮದಕರಿನಾಯಕ ಪ್ರತಿಮೆ ಅನಾವರಣ ಕಾರ್ಯಕ್ರಮ ತಾತ್ಕಾಲಿಕವಾಗಿ ಮುಂದೂಡಿಕೆ.

ಕಾನಹೊಸಹಳ್ಳಿ : ಕೂಡ್ಲಿಗಿ ತಾಲೂಕಿನ ಕಾನಹೊಸಹಳ್ಳಿ ಗ್ರಾಮದಲ್ಲಿ ದಿನಾಂಕ 13 10 2022 ರಂದು ನಡೆಯಬೇಕಾಗಿದ್ದ ಶ್ರೀ ರಾಜವೀರ ಮದಕರಿ ನಾಯಕ ಪ್ರತಿಮೆ ಅನಾವರಣ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ನಿರಂತರ ಸುರಿಯುವ ಮಳೆಯ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ವಾಲ್ಮೀಕಿ ಮುಖಂಡರು ತಿಳಿಸಿದ್ದಾರೆ.
ಕಾರ್ಯಕ್ರಮದ ಸಿದ್ಧತಾ ಕಾರ್ಯಗಳು ಭರದಿಂದ ಸಾಗಿದ್ದವು ಕಾನಹೊಸಹಳ್ಳಿ ಜನತೆಯಲ್ಲಿ ಸಂತೋಷ ಸಂಭ್ರಮ ಮನೆಮಾತಾಗಿತ್ತು ಆದರೆ ಹವಾಮಾನ ವೈಪರೀತ್ಯದಿಂದಾಗಿ ಕಾರ್ಯಕ್ರಮಕ್ಕೆ ಅಡ್ಡಿಯಾಗವ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಕೆಲವು ದಿನಗಳ ಕಾಲ ಮುಂದೂಡಲಾಯಿತು, ಶೀಘ್ರದಲ್ಲಿ ಕಾರ್ಯಕ್ರಮ ನಡೆಯುವ ಮುಂದಿನ ದಿನಾಂಕವನ್ನು ನಿಗದಿಪಡಿಸಲಾಗುವುದು ಆದ್ದರಿಂದ ವಾಲ್ಮೀಕಿ ಸಮುದಾಯದ ಮುಖಂಡರು, ಎಲ್ಲಾ ಸಮುದಾಯಗಳ ಮುಖಂಡರು ಸಾರ್ವಜನಿಕರು ಸಹಕರಿಸುವಂತೆ ವಾಲ್ಮೀಕಿಯ ಮುಖಂಡ ಕುಲುಮೆಹಟ್ಟಿ ವೆಂಕಟೇಶ್ ಸಾರ್ವಜನಿಕರಲ್ಲಿ ಮಾಧ್ಯಮದ ಮೂಲಕ ಮನವಿ ಮಾಡಿದ್ದಾರೆ…

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend