ಸರಳವಾಗಿ ವಾಲ್ಮೀಕಿ ಜಯಂತಿ ಆಚರಣೆ…!!!

ಸರಳವಾಗಿ ವಾಲ್ಮೀಕಿ ಜಯಂತಿ ಆಚರಣೆ

ಸಿಂಧನೂರು :ಅ.27. ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ವಾಲ್ಮೀಕಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಸಿಹಿ ಹಂಚಿ ಸಂಭ್ರಮಿಸಿದರು. ತಾಲೂಕಿನ ಅರಗಿನಮರ ಕ್ಯಾಂಪಿನಲ್ಲಿ ಆಚರಣೆ ಮಾಡಲಾಯಿತು.
ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷ ಸುರೇಶ ಕಟ್ಟಿಮನಿ ಮಾತನಾಡಿ ಮಹರ್ಷಿ ವಾಲ್ಮೀಕಿ ರವರು ನಾಯಕ ಸಮುದಾಯಕ್ಕೆ ಮಾತ್ರ ಸೀಮಿತವಾದವರಲ್ಲ,ಅವರು ಇಡೀ ಮಾನವ ಕುಲಕ್ಕೆ ಅವರ ಕೊಡುಗೆ ಇದೆ. ಅವರು ಬರೆದಂತಹ ರಾಮಾಯಣ ಇಡೀ ಎಲ್ಲಾ ಜಾತಿ ಜನಾಂಗಗಳು ಅನುಕರಣೆ ಮಾಡುವಂತಾದಾಗಿದೆ. ಅವರ ಆದರ್ಶಗಳನ್ನು ಅಳವಡಿಸಿಕೊಂಡು ಪಾಲನೆ ಮಾಡಬೇಕು. ಅಂದಾಗ ಮಾತ್ರ ಅವರಿಗೆ ಗೌರವ ಸಲ್ಲಿಸಿದಂತೆ ಆಗುತ್ತದೆ ಎಂದರು.
ಈ ಸಂದರ್ಭದಲ್ಲಿ ಹನುಮೇಶ ಅಂಗಡಿ, ರಾಮಣ್ಣ ನಾಯಕ, ರಾಮಣ್ಣ ಮೇಲಿನಮನಿ, ಮಾನಪ್ಪ ನಾಯಕ ಎಸ್. ಡಿ. ಎಮ್. ಸಿ ಅಧ್ಯಕ್ಷರು, ಶರಣಪ್ಪ ನಾಯಕ,ಕನಕರಾಯ ನಾಯಕ, ಉಪಸ್ಥಿತರಿದ್ದರು..

ವರದಿ. ದುಗ್ಗಪ್ಪ ಸಿಂಧನೂರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend