ಕನ್ನಡ ದ್ವಜ ಜಾಥಾ ಯಶಸ್ವಿಗೊಳಿಸಿ ಇತಿಹಾಸ ಸೃಷ್ಟಿ -ನಾಡಗೌಡ…!!!

ಕನ್ನಡ ದ್ವಜ ಜಾಥಾ ಯಶಸ್ವಿಗೊಳಿಸಿ ಇತಿಹಾಸ ಸೃಷ್ಟಿ -ನಾಡಗೌಡ.

ಸಿಂಧನೂರು :ಅ.31.ತಾಲೂಕಾ ಆಡಳಿತ ಹಾಗೂ ಕನ್ನಡಪರ ಸಂಘಟನೆಗಳ ಸಹಯೋಗದೊಂದಿಗೆ 75ನೇ ಅಮೃತ ಮಹೋತ್ಸವದ ಸ್ವಾತಂತ್ರ ದಿನ ಹರ್ ಗರ್ ತಿರಂಗ್ ಮಾದರಿಯಲ್ಲಿ ಕನ್ನಡ ರಾಜ್ಯೋತ್ಸವ ಕೂಡ ಆಚರಣೆಯು ಇತಿಹಾಸ ನಿರ್ಮಾಣ ಮಾಡಿದೆ. ಕನ್ನಡ ರಾಜ್ಯೋತ್ಸವ ದಿನದ ಹಿಂದಿನ ದಿನ ತಾಯಿ ಭುವನೇಶ್ವರಿ ಭಾವಚಿತ್ರ ಮೆರವಣಿಗೆಯಲ್ಲಿ 5 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು, ನಾಗರಿಕರು, ಕನ್ನಡ ಪರ ಸಂಘಟನೆಗಳು, ಕನ್ನಡ ಅಭಿಮಾನಿಗಳು ಸೇರಿ ಕನ್ನಡ ತಾಯಿ ಭುವನೇಶ್ವರಿಯ ಭಾವಚಿತ್ರ ನಗರದ ಪ್ರಮುಖ ವೃತ್ತಗಳಲ್ಲಿ ಸಂಚರಿಸಿ ಮೆರವಣಿಗೆ ಮಾಡುವ ಮೂಲಕ ಕನ್ನಡ ರಾಜ್ಯೋತ್ಸವ ಆಚರಣೆ ಇತಿಹಾಸ ನಿರ್ಮಾಣ ಮಾಡಲಾಗಿದೆ ಎಂದರು.
ನಗರದ ತಾಲೂಕು ಪಂಚಾಯತ್ ಕಛೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.ಕನ್ನಡ ರಾಜ್ಯೋತ್ಸವ ಮೆರವಣಿಗೆ ಯಶಸ್ವಿಗೆ ಕಾರಣರಾದ ಸಹಕಾರ ನೀಡಿದ ಸಂಘ ಸಂಸ್ಥೆಗಳು ತಾಲೂಕು ಆಡಳಿತ, ಶಿಕ್ಷಣ ಇಲಾಖೆ ಹಾಗೂ ನಗರಸಭೆ,ಎಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳು,ವಿವಿಧ ಪಕ್ಷದ ಮುಖಂಡರು, ಕನ್ನಡಪರ ಸಂಘಟನೆಗಳು ಭಾಗವಹಿಸಿ ಯಶಸ್ವಿಗೆ ಕಾರಣದ ಎಲ್ಲರಿಗೂ ಧನ್ಯವಾದಗಳು ತಿಳಿಸಿದರು.
ನವಂಬರ್ 1 ರಂದು ಬೆಳಿಗ್ಗೆ 9ಗಂಟೆಗೆ ರಾಷ್ಟ್ರ ಧ್ವಜಾರೋಹಣ ನೆರೆವೇರಿಸಿ ನಂತರ ಗಾಂಧಿ ಸರ್ಕಾಲ್ ನಲ್ಲಿ ಕನ್ನಡ ಧ್ವಜರೋಹಣ ಮಾಡಲಾಗುವುದು ಹಾಗೂ ಸಾಯಂಕಾಲ 5ಗಂಟೆಗೆ ತಹಸೀಲ್ದಾರ್ ಕಾರ್ಯಾಲಯದ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಅರುಣ್ ಎಚ್. ದೇಸಾಯಿ,ಇಓ ಲಕ್ಷ್ಮಿದೇವಿ,ನಗರಸಭೆ ಪೌರಾಯುಕ್ತ ಮಂಜುನಾಥ ಗುಂಡೂರ,ಬಿಇಓ ಶರಣಪ್ಪ ವಟಗಲ್ ,ಸೇರಿದಂತೆ ಇತರರು ಭಾಗವಹಿಸಿದ್ದರು..

ವರದಿ. ದುಗ್ಗಪ್ಪ ಸಿಂಧನೂರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend