ಕನ್ನಡ ಭಾಷೆಯು 2000 ವರ್ಷಗಳಿಂದಲೂ ತನ್ನ ಸತ್ವವನ್ನು ಉಳಿಸಿಕೊಂಡು ಬಂದಿದೆ ಎಂದು ಕತೆಗಾರ ಕೆ ಶ್ರೀನಿಧಿ ತಿಳಿಸಿದರು…!!!

ಕನ್ನಡ ಭಾಷೆಯು 2000 ವರ್ಷಗಳಿಂದಲೂ ತನ್ನ ಸತ್ವವನ್ನು ಉಳಿಸಿಕೊಂಡು ಬಂದಿದೆ ಎಂದು ಕತೆಗಾರ ಕೆ ಶ್ರೀನಿಧಿ ತಿಳಿಸಿದರು.

ಬಳ್ಳಾರಿ ಜಿಲ್ಲಾ ಕಸಾಪ ಕನ್ನಡ ಭವನದಲ್ಲಿ ಹಮ್ಮಿಕೊಂಡಿದ್ದ 67ನೇ ರಾಜ್ಯೋತ್ಸವ ಸಮಾರಂಭದಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು ಕನ್ನಡ ಚಿರಂತನವಾಗಿ ಉಳಿಯಬೇಕಾದರೆ ಹೆಚ್ಚೆಚ್ಚು ಕನ್ನಡ ಭಾಷೆಯನ್ನು ನಾವು ದಿನನಿತ್ಯದ ಜೀವನದಲ್ಲಿ ಬಳಸಬೇಕೆಂದು ಕರೆ ನೀಡಿದರು.

ಕಾರ್ಯಕ್ರಮವನ್ನು ನಿವೃತ್ತ ಅರ್ಥಶಾಸ್ತ್ರ ಉಪನ್ಯಾಸಕರಾದ ಜಿ ಶಾಂತಪ್ಪ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕಸಾಪ ಅಧ್ಯಕ್ಷ ಡಾ. ನಿಷ್ಠಿ ರುದ್ರಪ್ಪ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಅಂಚೆ ಇಲಾಖೆಯ ನಾಗಭೂಷಣ ಮತ್ತು ನ್ಯಾಯವಾದಿ ತಿಪ್ಪೇರುದ್ರ, ಸರ್ಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ಶಿವಾಜಿ ರಾವ್, ತಾಲೂಕು ಕಸಾಪ ಅಧ್ಯಕ್ಷ ಕೆ ವಿ ನಾಗರೆಡ್ಡಿ ಗ್ರಾಮೀಣ ಘಟಕದ ಅಧ್ಯಕ್ಷ ಎ. ಎರ್ರಿ ಸ್ವಾಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ಪೂರ್ವದಲ್ಲಿ ರಾಷ್ಟ್ರಧ್ವಜಾರೋಹಣ ಮತ್ತು ಕನ್ನಡ ಧ್ವಜಾರೋಹಣ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀಮತಿ ಲಕ್ಷ್ಮಿ ಪವನ್ ಕುಮಾರ್ ಶ್ರೀಮತಿ ಪುಷ್ಪ, ರೇಣುಕಾ ಪ್ರಸಾದ್, ಕೆ ಅಡಿವೆಪ್ಪ, ಆರ್ ಮೊಹಮ್ಮದ್ ಆಜಾಮ್, ಕೆ ವಿ ಮನೋಹರ ಅವರನ್ನು ಸನ್ಮಾನಿಸಲಾಯಿತು. ಸಂಘಟನಾ ಕಾರ್ಯದರ್ಶಿ
ಬಸವರಾಜ ಬಿಸಲಹಳ್ಳಿ ಸ್ವಾಗತಿಸಿ ವಂದಿಸಿದರು…

ವರದಿ. ವಿರೇಶ್. ಕೆ. ಎಸ್. ಕಾನಹೋಸಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend