ಗುಡೇಕೋಟೆ ಪ್ರೌಢಶಾಲೆಯಲ್ಲಿ ಪ್ರತಿಜ್ಞಾ ವಿಧಿ ಬೋಧಿಸಿದ ಶಿಕ್ಷಕರು…!!!

ಗುಡೇಕೋಟೆ ಪ್ರೌಢಶಾಲೆಯಲ್ಲಿ ಪ್ರತಿಜ್ಞಾ ವಿಧಿ ಬೋಧಿಸಿದ ಶಿಕ್ಷಕರು

ಗುಡೇಕೋಟೆ :- ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಗುಡೇಕೋಟೆ ಕರ್ನಾಟಕ ಪಬ್ಲಿಕ್ ಶಾಲೆ ಪ್ರೌಢಶಾಲಾ ವಿಭಾಗದ ಮುಖ್ಯಗುರುಗಳಾದ ಹೆಚ್ ಪಾಂಡುರಂಗ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.

ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರ ಜನ್ಮದಿನದ ಅಂಗವಾಗಿ ಮೈದಾನದ ಅವರಣದಲ್ಲಿ ಇಂದು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ಎಲ್ಲಾ ಸಿಬ್ಬಂದಿಗೆ ಮಕ್ಕಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ದೂರದೃಷ್ಟಿ ಮತ್ತು ಕಾರ್ಯಕ್ಷಮತೆಯಿಂದ ಸಾಧಿಸಿದ ರಾಷ್ಟ್ರೀಯ ಏಕೀಕರಣ ಸ್ಫೂರ್ತಿಯನ್ನು ಕಾಪಾಡುತ್ತೇನೆ. ರಾಷ್ಟ್ರದ ಆಂತರಿಕ ಭದ್ರತೆಯನ್ನು ಖಾತ್ರಿಪಡಿಸಲು ನಾನು ನನ್ನದೇ ಆದ ಕೊಡುಗೆಯನ್ನು ನೀಡುತ್ತೇನೆ. ಅಲ್ಲದೆ ರಾಷ್ಟ್ರದ ಐಕ್ಯತೆ, ಸಮಗ್ರತೆ ಮತ್ತು ಭದ್ರತೆಯನ್ನು ಕಾಪಾಡಲು ನನ್ನನ್ನು ಅರ್ಪಿಸಿಕೊಳ್ಳುತ್ತೇನೆ ಹಾಗೂ ನನ್ನ ದೇಶಬಾಂಧವರಲ್ಲಿ ಈ ಸಂದೇಶವನ್ನು ಸಾರಲು ಶ್ರಮಿಸುತ್ತೇನೆ ಎಂದು ಮುಖ್ಯಗುರುಗಳಾದ ಎಚ್.ಪಾಂಡುರಂಗ ಅವರು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಭಾರತ ದೇಶವನ್ನು ಏಕೀಕರಣಗೊಳಿಸಲು ಸರ್ದಾರ್ ವಲ್ಲಭಭಾಯ್ ಪಟೇಲ್‍ರ ಕೊಡುಗೆ ಅಪಾರ. ಹರಿದು ಹಂಚಿಹೋಗಿದ್ದ ದೇಶವನ್ನು ಒಗ್ಗೂಡಿಸಿದ ಕೀರ್ತಿ ಸರ್ದಾರ್ ವಲ್ಲಭಾಯ್‍ಪಟೇಲ್‍ರಿಗೆ ಸಲ್ಲುತ್ತದೆ. ಅವರ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡು ದೇಶದ ಉದ್ದಗಲಕ್ಕೂ ಅವರ ಸಂದೇಶಗಳನ್ನು ಪ್ರಚಾರಪಡಿಸೋಣ ಎಂದು ಎಚ್.ಪಾಂಡುರಂಗ.ಪ್ರೌಢಶಾಲಾ ವಿಭಾಗದ ಮುಖ್ಯಗುರುಗಳು.ಗುಡೇಕೋಟೆ…

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend