ಹೊಳಲ್ಕೆರೆ ಪಟ್ಟಣದಲ್ಲಿ ಅದ್ದೂರಿಯಾಗಿ ನಡೆದ 67 ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ…!!!

ಹೊಳಲ್ಕೆರೆ ಪಟ್ಟಣದಲ್ಲಿ ಅದ್ದೂರಿಯಾಗಿ ನಡೆದ 67 ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ..

ಕನ್ನಡ ನಾಡು ನುಡಿ ಭಾಷೆಯ ಬಗ್ಗೆ ಅಭಿಮಾನ ಬೆಳಸಿಕೊಳ್ಳಬೇಕು . ಶಾಸಕ ಎಂ ಚಂದ್ರಪ್ಪ

67 ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಹೊಳಲ್ಕೆರೆ ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಉರ್ದು ಶಾಲೆಯ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಶಾಸಕ ಹಾಗೂ KSRTC ನಿಗಮದ ಅದ್ಯಕ್ಷರು ಆದ ಎಂ ಚಂದ್ರಪ್ಪನವರು ಭಾಗವಹಿಸಿ ಧ್ವಜಾರೋಹಣ ನೆರವೇರಿಸಿ, ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು
ನಮ್ಮ ನಾಡು ಸಂಸ್ಕೃತಿಯ ನೆಲೆಯಾಗಿದೆ ಇದು ಸಾಧಕರ ಕರ್ಮಭೂಮಿ, ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಶ್ರೀಮಂತ ಸಂಸ್ಕೃತಿ ನಮ್ಮದು, ಪರಸ್ಪರ ಶಾಂತಿ, ಸೌಹಾರ್ದತೆಯಿಂದ ಕನ್ನಡಿಗರೆಲ್ಲರೂ ಒಗ್ಗಟ್ಟಿನಿಂದ ಬಾಳಿ ಕನ್ನಡ ನಾಡು-ನುಡಿ ಏಳಿಗೆಗಾಗಿ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸೋಣ ಎಂದರು.

ಇದೇ ವೇಳೆಯಲ್ಲಿ ಮಾತನಾಡಿದ ಅವರು ತಾಲೂಕಿನಲ್ಲಿ ರೈತರ ಅಡಿಕೆ ತೋಟಗಳು ಒಣಗುತ್ತಿರುವುದನ್ನ ಮನಗಂಡು ಕರೆಗಳು, ಚೆಕ್ ಡ್ಯಾಂ ಗಳು ಅಭಿವೃದ್ಧಿ ಪಡಿಸಿದ್ದೇನೆ ಇದರಿಂದಾಗಿ ಇಂದು ತಾಲೂಕಿನ ಎಲ್ಲ ಕೆರೆಗಳು ತುಂಬಿದ್ದು ಅನ್ನದಾತರ ಆತಂಕ ದೂರವಾಗಿದ್ದು. 2050 ರ ಜನಗಣತಿಗೆ ಅಂದಾಜು ಮಾಡಿ ಇಡೀ ತಾಲೂಕಿನ ಎಲ್ಲ ಹಳ್ಳಿಗಳಿಗೆ ಸಮರ್ಪಕ ಶುದ್ದ ಕುಡಿಯುವ ನೀರಿನ್ನ ವದಗಿಸುವಂತ ಯೋಜನೆ ತಂದು ಸಾರ್ವಜನಿಕರ ಕೆಲಸ ನನ್ನ ಸ್ವಂತದ ಕೆಲಸ ಎಂದು ಭಾವಿಸಿ ಕ್ಷೇತ್ರದಲ್ಲಿ ಹಗಲು ಇರುಳು ಒಡಾಡಿ ಎಲ್ಲ ಸಮಸ್ಯೆಗಳನ್ನು ಮನಗಂಡು ಅಭಿವೃದ್ಧಿ ಕೆಲಸ ಮಾಡುತ್ತಿದ್ದೇನೆ ಎಂದರು.

ಇನ್ನು ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಶಾಸಕರು ಸನ್ಮಾನಿಸಿದರು.. ಶಾಲಾ ವಿದ್ರಾರ್ಥಿಗಳು ಕರುನಾಡಿನ ಭಾವುಟ ಇಡಿದು ನೃತ್ಯ ಮಾಡಿ ಎಲ್ಲರನ್ನು ಮನರಂಜಿಸುವ ಮೂಲಕ ಕಾರ್ಯಕ್ರಮಕ್ಕೆ ಮೆರೆಗು ತಂದರು..

ಈ ಸಂದರ್ಭದಲ್ಲಿ ಹೊಳಲ್ಕೆರೆ ತಹಶೀಲ್ದಾರರಾದ ಶ್ರೀಮತಿ ರೇಖಾ ಟಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಅಂಜನ್ ಕುಮಾರ್, ಪುರಸಭೆ ಅಧ್ಯಕ್ಷರಾದ ಶ್ರೀ ಆರ್. ಎ. ಅಶೋಕ್, ಪುರಸಭೆ ಉಪಾಧ್ಯಕ್ಷರಾದ ಶ್ರೀ ಕೆ. ಸಿ. ರಮೇಶ್, ಹೊಳಲ್ಕೆರೆ ತಾಲ್ಲೂಕು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಶ್ರೀ ಲೋಕೇಶ್, ಹೊಳಲ್ಕೆರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಎನ್. ಶಿವಮೂರ್ತಿ, ಹೊಳಲ್ಕೆರೆ ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷರಾದ ಶ್ರೀ ಪಿ. ಹನುಮಂತಪ್ಪ, ದಾವಣಗೆರೆ ನಿವೃತ್ತ ಸಹಾಯಕ ನಿರ್ದೇಶಕರು ಆಹಾರ, ನಾಗರಿಕ ಸರಬರಾಜು ಇಲಾಖೆಯ ಶ್ರೀ ಕುಬೇರಪ್ಪ, ಹೊಳಲ್ಕೆರೆ ಆರಕ್ಷಕ ವೃತ್ತ ನಿರೀಕ್ಷಕರಾದ ಶ್ರೀ ಕೆ.ಎನ್.ರವೀಶ್, ಹೊಳಲ್ಕೆರೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಹೆಚ್. ಶ್ರೀನಿವಾಸ್, ಹೊಳಲ್ಕೆರೆ ಪುರಸಭೆ ಮುಖ್ಯ ಅಧಿಕಾರಿಗಳಾದ ಶ್ರೀ ವಾಸೀಂ, ಪುರಸಭೆ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಕನ್ನಡ ಪರ ಸಂಘಟನೆಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ಮತ್ತು ಸಮಸ್ತ ಗ್ರಾಮಸ್ಥರು ಪಾಲ್ಗೊಂಡಿದ್ದರು…

ವರದಿ. ಸುರೇಶ್. ಚಿತ್ರದುರ್ಗ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend