;

ವಿಜಯನಗರ: ವೀರವನಿತೆ ಒನಕೆ ಓಬವ್ವ ಜಯಂತಿ ಆಚರಣೆ…!!!

ವಿಜಯನಗರ: ವೀರವನಿತೆ ಒನಕೆ ಓಬವ್ವ ಜಯಂತಿ ಆಚರಣೆ
ಹೊಸಪೇಟೆ(ವಿಜಯನಗರ), ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕತಿ ಇಲಾಖೆ ಹಾಗೂ ನಗರಸಭೆಯ ಸಂಯುಕ್ತಾಶ್ರಯದಲ್ಲಿ ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ಶುಕ್ರವಾರದಂದು ಆಚರಿಸಲಾಯಿತು.


ವಿಜಯನಗರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಹೊಸಪೇಟೆ ಚಲುವಾದಿ ಕೇರಿಯ ಬಳಿ ನಿರ್ಮಿಸಲಾದ ವೇದಿಕೆಯಲ್ಲಿ ವೀರವನಿತೆ ಒನಕೆ ಓಬವ್ವ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಎಲ್ಲಾರಿಗೂ ಜಯಂತಿಯ ಶುಭಾಷಯಗಳನ್ನು ತಿಳಿಸಿದರು.
ವೀರವನಿತೆ ಒನಕೆ ಓಬವ್ವ ಜಯಂತಿ ಅಂಗವಾಗಿ ಓಬವ್ವ ಅವರ ಭಾವಚಿತ್ರದ ಮೆರವಣಿಗೆಯು ಚೆಲುವಾದಿ ಕೇರಿಯಿಂದ ಆರಂಭಗೊಂಡು ವೀರಮದಕರಿ ವೃತ್ತ, ಉದ್ಯೋಗ ಪೆಟ್ರೋಲ್ ಬಂಕ್, ಎಲ್.ಎಫ್.ಎಸ್ ಶಾಲೆ ಮಾರ್ಗವಾಗಿ ಡೊಳ್ಳುಕುಣಿತ, ಕೋಲಾಟ, ಹಗಲು ವೇಷದಾರಿಗಳು ಸೇರಿದಂತೆ ಇತರೆ ಸಾಂಸ್ಕøತಿಕ ಕಲಾತಂಡಗಳೊಂದಿಗೆ ಸಾಗಿದ ಮೆರವಣಿಗೆ ಪುನಃ ಚೆಲುವಾದಿ ಕೇರಿಯ ವೇದಿಕೆ ಹತ್ತಿರಕೊನೆಗೊಂಡಿತು.
ಮೆರವಣಿಗೆಯಲ್ಲಿ ಮಕ್ಕಳು ವೀರವನಿತೆ ಒನಕೆ ಓಬವ್ವನ ವೇಷ ಧರಿಸಿದ್ದು ನೋಡುಗರನ್ನು ಅಕರ್ಷಿಸಿತು.
ಈ ಸಂದರ್ಭದಲ್ಲಿ ಜಿಲ್ಲಾ ಪೋಲೀಸ್ ವರಷ್ಟಧಿಕಾರಿ ಶ್ರೀಹರಿಬಾಬು, ಹೊಸಪೇಟೆ ತಹಶೀಲ್ದಾರ್ ವಿಶ್ವಜೀತ್ ಮೆಹ್ತಾ, ವೀರವನಿತೆ ಒನಕೆ ಓಬವ್ವ ಸಮಾಜದ ಮುಖಂಡರು ಸೇರಿದಂತೆ ಇತರರು ಇದ್ದರು..

ವರದಿ. ಗಣೇಶ್. ಹೊಸಪೇಟೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;