ಜಿನುಗು ಕೆರೆ ನಿರ್ಮಾಣ ಕಾಮಗಾರಿಗೆ ಶಾಸಕ ಎನ್ ವೈ ಜಿ ಭೂಮಿ ಪೂಜೆ ನೆರವೇರಿಸಿದರು

ಕೂಡ್ಲಿಗಿ ತಾಲೂಕಿನ ಚಿಕ್ಕ ಜೋಗಿಹಳ್ಳಿ ತಾಂಡದ ಹತ್ತಿರ ಜಿನುಗು ಕೆರೆ ನಿರ್ಮಾಣ ಕಾಮಗಾರಿ ಭೂಮಿ ಪೂಜೆ. 375.00 ಲಕ್ಷಗಳು ಹಾಗೂ ಮಾಕನಡುಕು ಕಂದಾಯ ಗ್ರಾಮದಡಿ ಚಿಕ್ಕಜೋಗಿಹಳ್ಳಿ ತಾಂಡದ ಹತ್ತಿರ ಜಿನುಗು ಕೆರೆ ನಿರ್ಮಾಣ ಕಾಮಗಾರಿ 200.00ಲಕ್ಷಗಳು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಉಪ ವಿಭಾಗ- ಕೂಡ್ಲಿಗಿ ಇವರ ಅಂಗಡಿಯಲ್ಲಿ ಬರುವ ಕಾಮಗಾರಿಗೆ ಭೂಮಿ ಪೂಜೆ ಕಾರ್ಯಕ್ರಮವನ್ನು ಕೂಡ್ಲಿಗಿ ಶಾಸಕ ಎನ್ ವೈ ಗೋಪಾಲಕೃಷ್ಣ ಅವರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದುರ್ಗ ಸೂರ್ಯಪಾಪಣ್ಣ, ಬಿಜೆಪಿ ಮುಖಂಡರಾದ ಕೆ.ಎಂ.ತಿಪ್ಪೇಸ್ವಾಮಿ, ಗುಂಡುಮುಣುಗು ಎಸ್.ಪಿ.ಪ್ರಕಾಶ್, ಸಣ್ಣ ನೀರಾವರಿ ಇಲಾಖೆಯ ಎಆರ್ಡಬ್ಲ ಟಿ ಎಂ ರಾಮಾಂಜನೇಯಲು, ಪಿಡಬ್ಲ್ಯುಡಿ ಎಇಇ ಸುದರ್ಶನರೆಡ್ಡಿ, ಎಇ ನಾಗನಗೌಡ, ಎಡಬ್ಲ್ಯೂ ಮಲ್ಲಿಕಾರ್ಜುನ್, ಗುತ್ತಿಗೆದಾರು ದೀಲಿಪ್ ಕುಮಾರ್ ಸೇರಿದಂತೆ ವಿವಿಧ ಅಧಿಕಾರಿಗಳು, ಸ್ಥಳೀಯ ಗ್ರಾಪಂ ಜನಪ್ರತಿನಿಧಿಗಳು, ಬಿಜೆಪಿ ಕಾರ್ಯಕರ್ತರು, ಮುಖಂಡರು ಇದ್ದರು..

ವರದಿ. ಕೆ. ಎಸ್. ವಿರೇಶ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
