;

ನ್ಯಾಯಾಧೀಶರ ಮಧ್ಯಸ್ಥಿಕೆ ತರಬೇತಿ ಕಾರ್ಯಕ್ರಮ…!!!

ನ್ಯಾಯಾಧೀಶರ ಮಧ್ಯಸ್ಥಿಕೆ ತರಬೇತಿ ಕಾರ್ಯಕ್ರಮ
ಬಳ್ಳಾರಿ,: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಮಧ್ಯಸ್ಥಿಕೆ ಕೇಂದ್ರ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಬಳ್ಳಾರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಯ ನ್ಯಾಯಾಧೀಶರಿಗೆ ಒಂದು ದಿನದ ನ್ಯಾಯಾಧೀಶರ ಮಧ್ಯಸ್ಥಿಕೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಪುಷ್ಪಅಂಜಲಿ ದೇವಿ ಅವರು ಕಾರ್ಯಕ್ರವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ನ್ಯಾಯಧೀಶರುಗಳು ಸಂವಿಧಾನದ ಪ್ರಸ್ತಾವನೆ ಓದುವುದರ ಮೂಲಕ ಸಂವಿಧಾನ ದಿನ ಆಚರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಎಸ್.ರೇಖಾ, ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಾರುತಿ ಬಗಾದೆ, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸತೀಶ್ ಬಾಳಿ, ಸಂಪನ್ಮೂಲ ವ್ಯಕ್ತಿಗಳಾಗಿ ಬೆಂಗಳೂರು ಮಧ್ಯಸ್ಥಿಕೆ ಕೇಂದ್ರದ ತರಬೇತುದಾರರಾದ ಪ್ರಶಾಂತ್ ಚಂದ್ರ, ಬೃಂದಾ ನಂದಕುಮಾರ್ ಸೇರಿದಂತೆ ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು ಜಿಲ್ಲಾ ನ್ಯಾಯಾಧೀಶರುಗಳು ಭಾಗವಹಿಸಿದ್ದರು.
ನಂತರ ನ್ಯಾಯಾಧೀಶರುಗಳಿಗೆ ಮಧ್ಯಸ್ಥಿಕೆ ತರಬೇತಿ ನೀಡಲಾಯಿತು…

ವರದಿ. ವಿರೇಶ್, ಎಚ್, ಸಿರಿಗುಪ್ಪ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;