ಕೂಡ್ಲಿಗಿ ಪ್ರವಾಸಿ ಮಂದಿರದಲ್ಲಿ ಬೆಂಗಳೂರು ಚಲೋ ಕಾರ್ಯಕ್ರಮದ ಪೂರ್ವಭಾವಿ ಸಭೆ…!!!

  1. ಕೂಡ್ಲಿಗಿ ಪ್ರವಾಸಿ ಮಂದಿರದಲ್ಲಿ ಬೆಂಗಳೂರು ಚಲೋ ಕಾರ್ಯಕ್ರಮದ ಪೂರ್ವಭಾವಿ ಸಭೆ
    ಕೂಡ್ಲಿಗಿ:ನಗರದಲ್ಲಿರುವ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ವಿಜಯನಗರ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಬೆಂಗಳೂರು ಚಲೋ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಯಿತು ಈ ಸಭೆಯಲ್ಲಿ ಜಿಲ್ಲಾಧ್ಯಕ್ಷರಾದ ಸಣ್ಣಕ್ಕಿ ಲಕ್ಷ್ಮಣ್ ರವರು ದಿನಾಂಕ: 12-12-2022 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಗ್ರಾಮ ಪಂಚಾಯಿತಿ ಸದಸ್ಯರುಗಳ ಬೆಂಗಳೂರು ಚಲೋ ಕಾರ್ಯಕ್ರಮವನ್ನು ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಆಯೋಜಿಸಲಾಗಿದೆ ಈ ಕಾರ್ಯಕ್ರಮಕ್ಕೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳು, ಉಪಾಧ್ಯಕ್ಷರು ಸದಸ್ಯರುಗಳು ಆಗಮಿಸಲಿದ್ದಾರೆ ಕೂಡ್ಲಿಗಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರುಗಳು ಉಪಾಧ್ಯಕ್ಷರುಗಳು, ಸದಸ್ಯರುಗಳು “” ಬೆಂಗಳೂರು ಚಾಲೋ”” ಕಾರ್ಯಕ್ರಮಕ್ಕೆ ಆಗಮಿಸಿ ನಮ್ಮ ಗ್ರಾಮ ಪಂಚಾಯಿತಿ ಸದಸ್ಯರುಗಳ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸೋಣ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಕೂಡ್ಲಿಗಿ ತಾಲೂಕು ಒಕ್ಕೂಟದ ಅಧ್ಯಕ್ಷರಾದ ಕೆ ಮುರಳಿ ರಾಜ್. ರವರು ಮಾತನಾಡಿ ನಮ್ಮ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರುಗಳು ಕಾರ್ಯಕ್ರಮಕ್ಕೆ ಹಾಜರಾಗಿ ನಮ್ಮ ಒಕ್ಕೂಟವನ್ನು ಇನ್ನಷ್ಟು ಬಲಪಡಿಸೋಣ ಎಂದರು ನಂತರ ಜಿಲ್ಲಾಧ್ಯಕ್ಷರನ್ನು ಉದ್ದೇಶಿಸಿ ನೀವು ನಮ್ಮ ಕೂಡ್ಲಿಗಿ ತಾಲೂಕಿಗೆ ಆಗಮಿಸಿದ್ದು ನಮ್ಮ ಒಕ್ಕೂಟದ ಕಡೆಯಿಂದ ತುಂಬು ಹೃದಯದ ಧನ್ಯವಾದಗಳು ನಮ್ಮ ಕೂಡ್ಲಿಗಿ ತಾಲೂಕಿನಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳ ಸಮಸ್ಯೆಯನ್ನು ನಿಮ್ಮ ಮುಂದೆ ಹಂಚಿಕೊಳ್ಳುತ್ತೇನೆ ನಮ್ಮ ಸದಸ್ಯರಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಪಂಚಾಯಿತಿ ಸಿಬ್ಬಂದಿಗಳು ಸರಿಯಾದ ರೀತಿ ಮಾಹಿತಿ ನೀಡುತ್ತಿಲ್ಲ ಯಾವುದಾದರೂ ವಿಷಯವನ್ನು ಚರ್ಚಿಸಿದರೆ ಅದಕ್ಕೆ ಸರಿಯಾಗಿ ಸ್ಪಂದಿಸುತ್ತಿಲ್ಲ ಇನ್ನಿತರೆ ಯಾವುದೇ ಕಾಮಗಾರಿಯ ವಿಷಯವನ್ನು ನಮ್ಮ ಗಮನಕ್ಕೆ ತರದೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು(PDO) ಡಾಟಾ ಎಂಟ್ರಿ ಆಪರೇಟರ್ ಗಳು ಗ್ರಾಮ ಪಂಚಾಯಿತಿಗೆ ಬರುವ ಕಾಮಗಾರಿಗಳಿಗೆ ಸಿದ್ದರಾಗಿದ್ದಾರೆ ಆದ್ದರಿಂದ ನೀವಾದರೂ ಮೇಲಿನ ಅಧಿಕಾರಿಗಳಿಗೆ ಸೂಚಿಸಿ ನಮ್ಮ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ನಮ್ಮ ಸದಸ್ಯರಿಗೆ ಸಿಗುವಂತಹ ಎಲ್ಲಾ ಕಾಮಗಾರಿಯನ್ನು ಸದಸ್ಯರ ಗಮನಕ್ಕೆ ತರುವಂತೆ ಸೂಚಿಸಿ ಎಂದು ಅಳಲು ವ್ಯಕ್ತಪಡಿಸಿದರು. ಈ ಸಭೆಯಲ್ಲಿ ಜಿಲ್ಲಾಧ್ಯಕ್ಷರಾದ ಸಣ್ಣಕ್ಕಿ ಲಕ್ಷ್ಮಣ್ ತಾಲೂಕು ಅಧ್ಯಕ್ಷರಾದ ಕೆ ಮುರುಳಿರಾಜ. ಗೌರಮ್ಮ ಅಧ್ಯಕ್ಷರು ಹಾಗೂ ಕೂಡ್ಲಿಗಿ ತಾಲೂಕು ಒಕ್ಕೂಟದ ಎಲ್ಲಾ ಪದಾಧಿಕಾರಿಗಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕೂಡ್ಲಿಗಿ ತಾಲೂಕು ಎಲ್ಲಾ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಈ ಸಭೆಯಲ್ಲಿ ಇದ್ದರು .

ವರದಿ : ಸಿ ಅರುಣ್ ಕುಮಾರ್ ವರದಿಗಾರರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend