ಗಣಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಶ್ರೀನಿಧಿ
ಕೂಡ್ಲಿಗಿ: ತಾಲೂಕಿನ ಬೆಳ್ಳಗಟ್ಟೆ ಗ್ರಾಮ ಪಂಚಾಯತಿಯಲ್ಲಿ ಆಯೋಜಿಸಿದ್ದ ಗಣಿತ ಕಲಿಕಾ ಆಂದೋಲನ ಗಣಿತ ಸ್ಪರ್ಧೆಯಲ್ಲಿ ಕರಡಿಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ 4ನೇ ತರಗತಿ ವಿದ್ಯಾರ್ಥಿಯಾದ ಶ್ರೀನಿಧಿ ಗಣಿತ ಸ್ಪರ್ಧೆಯಲ್ಲಿ ಅತಿ ಹೆಚ್ಚು ಅಂಕ ಪಡೆದುಕೊಂಡು ಶಾಲೆಗೆ ಪ್ರಥಮ ಸ್ಥಾನ ಪಡೆದುಕೊಂಡು ಶಾಲೆಗೆ ಕೀರ್ತಿ ತಂದಿರುತ್ತಾರೆ. ಪ್ರಥಮ ಬಹುಮಾನ ಪಡೆದು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ. ಇನ್ನು ವಿದ್ಯಾರ್ಥಿಗೆ ಬಹುಮಾನವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಬಸವರಾಜ, ಸಿ ಆರ್ ಪಿ ಸಂಪನ್ಮೂಲ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು. ಸರ್ವ ಸದಸ್ಯರಗಳು, ಎಲ್ಲಾ ಶಾಲೆಯ ವಿದ್ಯಾರ್ಥಿಗಳು, ಮುಖ್ಯ ಗುರುಗಳು, ಸಹ ಶಿಕ್ಷಕರು ಹಾಗೂ ಪಂಚಾಯತಿ ಸಿಬ್ಬಂದಿಗಳು, ಊರಿನ ಗ್ರಾಮಸ್ಥರು, ಭಾಗವಹಿಸಿದ್ದರು.

ವರದಿಗಾರರು : ಸಿ ಅರುಣ್ ಕುಮಾರ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
