;

ಮೊರಬ: ಶ್ರೀ ವೀರಭದ್ರೇಶ್ವರ ಸಂಭ್ರಮದ ರಥೋತ್ಸವ…!!!

ಮೊರಬ: ಶ್ರೀ ವೀರಭದ್ರೇಶ್ವರ ಸಂಭ್ರಮದ ರಥೋತ್ಸವ.
ಕೂಡ್ಲಿಗಿ: ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಮರಬ ಗ್ರಾಮದಲ್ಲಿ ಬುಧವಾರ ಸಂಜೆ ಶ್ರೀ ವೀರಭದ್ರಶ್ವರ ರಥೋತ್ಸವ ಅದ್ದೂರಿಯಾಗಿ ನೆರವೇರಿತು.
ಶ್ರೀ ವೀರಭದ್ರೇಶ್ವರ ಸ್ವಾಮಿಯ ಉತ್ಸವಮೂರ್ತಿಯನ್ನು ದೇವಸ್ಥಾನದಿಂದ ಸಕಲ ವಾದ್ಯಗಳೊಂದಿಗೆ ರಥದ ಬಳಿ ತಂದು ದೇವರ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಸ್ವಾಮಿಯ ರಥ ಮುಂದೆ ಸಾಗುತ್ತಿದ್ದಂತೆ ನೆರೆದಿದ್ದ ಭಕ್ತರು ಜಯಘೋಷ ಹಾಕಿ. ಬಾಳೆಹಣ್ಣು. ಉತ್ತುತ್ತಿ .ಮಂಡಕ್ಕಿ. ಎಸೆದು ಭಕ್ತಿ ಸಮರ್ಪಿಸಿದರು. ಇದೇ ಸಂದರ್ಭದಲ್ಲಿ ಕೂಡ್ಲಿಗಿ ಸೇರಿದಂತೆ ವಿವಿಧ ತಾಲೂಕು ಜಿಲ್ಲೆಯ ಹಾಗೂ ಸುತ್ತಮುತ್ತಲ ಗ್ರಾಮದ ಸಾವಿರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ಸ್ವಾಮಿಯ ದರ್ಶನ ಪಡೆದರು. ಪೊಲೀಸ್ ಇಲಾಖೆಯ ಸಿಬ್ಬಂದಿ ವರ್ಗದವರು ಗೃಹರಕ್ಷಕ ದಳದ ಸಿಬ್ಬಂದಿಗಳು ಸೂಕ್ತವಾದ ಬಂದೋಬಸ್ತ್ ಕಾರ್ಯ ನಿರ್ವಹಿಸಿದರು….

ವರದಿ.ವಿರೇಶ್. ಕೆ. ಎಸ್. ಕಾನಹೋಸಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;