ಎಸ್.ಎಸ್. ಘಾಟಿ ಜಾತ್ರೆಯಲ್ಲಿ ಆರೋಗ್ಯ ಶಿಕ್ಷಣ ವಸ್ತು ಪ್ರದರ್ಶನ
ಬೆಂಗಳೂರು ಗ್ರಾಮಾಂತರ, : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿರುವ ಶ್ರೀ ಘಾಟಿ ಸುಬ್ರಮಣ್ಯ ದೇವಾಲಯದ ಬ್ರಹ್ಮರಥೋತ್ಸವ ಹಾಗೂ ಜಾತ್ರೆಯಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಐಇಸಿ ವಿಭಾಗದಿಂದ ಆರೋಗ್ಯ ಇಲಾಖೆ ಯೋಜನೆಗಳು ಮತ್ತು ಕಾರ್ಯಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಆರೋಗ್ಯ ಶಿಕ್ಷಣ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಮತ್ತು ಎಲ್ ಇ ಡಿ ಮೂಲಕ ವಿಡಿಯೋ ಪ್ರದರ್ಶನ ಹಮ್ಮಿಕೊಳ್ಳಲಾಯಿತು.
ಸದರಿ ಕಾರ್ಯಕ್ರಮ ದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು ಎಸ್ ಎಸ್ ಘಾಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು ಆರೋಗ್ಯ ಇಲಾಖೆಯ ಸಿಬ್ಬಂದಿಗಳು,ಆಶಾ ಕಾರ್ಯಕರ್ತರು ಉಪಸ್ಥಿತರಿದ್ದರು..

ವರದಿ. ಕಲಾವತಿ. ಎನ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
