ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ರಾಜ್ಯ ಕಾರ್ಯದರ್ಶಿ ಮನೆಗೆ ಮಾಜಿ ಸಚಿವ ಬೇಟಿ!!!!! ಕೂಡ್ಲಿಗಿ:ವಿಜಯನಗರ ಜಿಲ್ಲೆಯ ಕೂಡ್ಲಿಗಿಯ ಪಟ್ಟಣ ಪಂಚಾಯಿತಿ ಸದಸ್ಯ ಹಾಗೂ ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ರಾಜ್ಯ ಕಾರ್ಯದರ್ಶಿ ಸಯ್ಯದ್ ಶುಕೂರ್ ಅವರ ಇಲ್ಲಿನ ನಿವಾಸಕ್ಕೆ ಮಾಜಿ ಸಚಿವ ಹಾಗೂ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ B.Z.ಜಮೀರ್ ಅಹಮದ್ ಖಾನ್ ಅವರು ಭೇಟಿ ನೀಡಿ ಸಯ್ಯದ್ ಶುಕೂರ್ ಕುಟುಂಬದವರ ಜೊತೆ ಕುಶಲೋಪರಿ ವಿಚಾರಿಸಿ. ಇಲ್ಲಿನ ಸ್ಥಳೀಯ ಮುಖಂಡರುಗಳೊಂದಿಗೆ ಮುಂಬರುವ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದಲ್ಲಿ ಈ ಸಾರಿ ಕಾಂಗ್ರೆಸ್ ಪಕ್ಷದಿಂದ ಯಾರೇ ಅಭ್ಯರ್ಥಿಯಾದರು ನಿಮ್ಮ ಕ್ಷೇತ್ರದಲ್ಲಿ ನೀವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರಬೇಕು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರಾದ ಕಾವಲ್ಲಿ ಶಿವಪ್ಪ ನಾಯಕ, ಮರಬ ಮೌಲಾನ್, ಇದಾಬುಲ್ಲ, ಜಬೀ, ಅನ್ನಾನ್, ಮುಜಮಿಲ್, ಇಲ್ಯಾಸ್, ಇನಾಯತ್, ಆಫೀಸ್,ನಾಸಿರ್, ಅಬ್ದುಲ್ಲಾ ಹಾಗೂ ಹಿರಿಯ ಮುಖಂಡರು ಮತ್ತು ಯುವ ಕಾರ್ಯಕರ್ತರು ಉಪಸ್ಥಿತರಿದ್ದರು..

ವರದಿ. ಬಸಪ್ಪ ಬಣವಿಕಲ್ಲು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
