;

ಮುಖ್ಯಮಂತ್ರಿಗಳಿಂದ ಬಳ್ಳಾರಿ ಉತ್ಸವ ಲಾಂಛನ ಬಿಡುಗಡೆ…!!!

ಮುಖ್ಯಮಂತ್ರಿಗಳಿಂದ ಬಳ್ಳಾರಿ ಉತ್ಸವ ಲಾಂಛನ ಬಿಡುಗಡೆ
ಬಳ್ಳಾರಿ,: ಬಳ್ಳಾರಿ ಜಿಲ್ಲೆಯಲ್ಲಿ ಜನವರಿ 21 ಮತ್ತು 22 ರಂದು ನಡೆಯಲಿರುವ ಬಳ್ಳಾರಿ ಉತ್ಸವದ ನಿಮಿತ್ತ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಉತ್ಸವದ ಲಾಂಛನ ಬಿಡುಗಡೆ ಮಾಡಿದರು.
ಜ.4ರಂದು ನಗರದ ಡಾ.ರಾಜ್‍ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಬಳ್ಳಾರಿ ಜಿಲ್ಲೆಯ ವಿವಿಧ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭದಲ್ಲಿ ಅವರು ಉತ್ಸವದ ಲಾಂಛನ ಬಿಡುಗಡೆ ಮಾಡಿದರು.
ಚೊಚ್ಚಲ ಬಳ್ಳಾರಿ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲು ವಿವಿಧ ಉಪ ಸಮಿತಿಗಳನ್ನು ರಚಿಸಲಾಗಿದೆ. ಸಾಂಸ್ಕತಿಕ ಕಾರ್ಯಕ್ರಮಗಳು, ವಸಂತ ವೈಭವ, ಎತ್ತಿನ ಬಂಡಿ ಮೆರವಣಿಗೆ, ಕುಸ್ತಿ, ರಂಗೋಲಿ ಸ್ಪರ್ಧೆ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಉತ್ಸವದಲ್ಲಿ ಆಚರಿಸಲಾಗುತ್ತದೆ. ಇದಕ್ಕೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಜಿಲ್ಲಾಡಳಿತದಿಂದ ನಡೆಸಲಾಗುತ್ತಿದೆ.

ವರದಿ. ಉಮೇಶ್. ಬಳ್ಳಾರಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;