;

ದುರಸ್ತಿ ಕಾಣದ ಶುದ್ಧ ಕುಡಿಯುವ ನೀರಿನ ಘಟಕ.

ದುರಸ್ತಿ ಕಾಣದ ಶುದ್ಧ ನೀರಿನ ಘಟಕ.
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿಯ ಹೊಸಹಳ್ಳಿ ಗ್ರಾಮದಲ್ಲಿ ಶುದ್ಧ ನೀರಿನ ಘಟಕ ಕೆಟ್ಟುನಿಂತಿದ್ದು ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪರಿತಪಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪಟ್ಟಣ ಪ್ರದೇಶದ ನಾಗರಿಕರಂತೆ ಗ್ರಾಮೀಣ ಭಾಗದ ಜನರು ಸಹ ಆರೋಗ್ಯದ ದೃಷ್ಟಿಯಿಂದ ಶುದ್ಧ ಕುಡಿಯುವ ನೀರು ಕುಡಿಯಲೆಂದು ಸರ್ಕಾರ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಿದೆ. ಆದರೆ, ಅದು ಕೆಟ್ಟರೆ ಮತ್ತೆ ದುರಸ್ತಿಗೊಳಿಸದೆ ಆಡಳಿತ ಯಂತ್ರ ಕಡೆಗಣಿಸಿರುವುದರಿಂದ ಗ್ರಾಮಗಳಲ್ಲಿ ಮತ್ತೆ ಹಳೆಯ ಪದ್ಧತಿ ಮರಳುವಂತಿದೆ. ಕೂಡ್ಲಿಗಿ ತಾಲೂಕಿನ ಕಾನ ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರೆಕಲ್ಲು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು 6– 7 ತಿಂಗಳುಗಳಾದರೂ ಈವರೆಗೂ ಇದನ್ನು ಯಾರು ದುರಸ್ತಿಗೊಳಿಸಿಲ್ಲ.ಈ ಗ್ರಾಮಗಳಲ್ಲಿ ಫ್ಲೋರೈಡ್ ಅಂಶ ಜಾಸ್ತಿ ಇದ್ದು ಜನರು ಲವಣಾಂಶ ತುಂಬಿರುವ ನೀರು ಕುಡಿದು ಹಲವು ಕಾಯಿಲೆಗಳಿಗೆ ತುತ್ತಾಗುವ ಪರಿಸ್ಥಿತಿ ಬಂದಿದೆ.ಗ್ರಾಮೀಣ ಪ್ರದೇಶದ ಜನರು ಶುದ್ಧ ನೀರನ್ನು ಕುಡಿದು ಆರೋಗ್ಯವಂತರಾಗಿರಲು ಶುದ್ಧ ನೀರಿನ ಘಟಕ ಅಳವಡಿಸಿದ್ದು ಯಾವುದೇ ಪ್ರಯೋಜನ ಇಲ್ಲದಂತಾಗಿದೆ. ಯಂತ್ರ ಕೆಟ್ಟ ಬಳಿಕ ಕೇಳುವವರು ಯಾರು ಇಲ್ಲದಂತಾಗಿದೆ ಈ ಬಾರಿಯಾದರೂ ಸಂಬಂಧಪಟ್ಟ ಗ್ರಾಮೀಣ ಶುದ್ಧ ಕುಡಿಯುವ ನೀರಿನ ಘಟಕದ ಅಧಿಕಾರಿಗಳು ತಾಲೂಕಿನ ಹೊಸಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಗ ಬರುವ ಕರೆಕಲ್ಲು ಗ್ರಾಮದಲ್ಲಿ ಕೆಟ್ಟು ನಿಂತಿರುವ ಶುದ್ಧ ನೀರಿನ ಘಟಕವನ್ನು ದುರಿಸ್ತಿಗೊಳಿಸಿ ಜನರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕಾಗಿ ಇಲ್ಲಿನ ಜನರು ಹಾಗೂ ವಿದ್ಯಾವಂತರುಮನವಿ ಮಾಡಿಕೊಳ್ಳುತ್ತಿದ್ದಾರೆ. ಶುದ್ಧ ನೀರಿನ ಘಟಕಗಳು ಬಹುತೇಕ ಹಳ್ಳಿಗಳಲ್ಲಿ ಕೆಟ್ಟು ನಿಂತಿರುವ ಪರಿಸ್ಥಿತಿ ಒದಗಿ ಬಂದಿದ್ದು ಆದಷ್ಟು ಬೇಗ ಈ ಘಟಕಗಳನ್ನು ದುರಸ್ತಿಗೊಳಿಸದಿದ್ದಲ್ಲಿ ಸಾರ್ವಜನಿಕರು ನಾಗರಿಕರು ವಿವಿಧ ಸಂಘಟನೆಯ ಪದಾಧಿಕಾರಿಗಳು ಮಹಿಳಾ ಸಂಘಟನೆಗಳು ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಪ್ರತಿಭಟನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ…

ವರದಿ. ವಿರೇಶ್, ಕೆ, ಎಸ್, ಕಾನಹೋಸಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;