;

ಕೂಡ್ಲಿಗಿ ಪಪಂ ಸಭೆ: ಮೂಲಭೂತ ಸೌಕರ್ಯಗಳಿಗೆ ಆಧ್ಯತೆ,ವಸತಿ ಯೋಜನೆಯಲ್ಲಿ ಪಾರದರ್ಶಕತೆಗೆ ಸೂಚನೆ…!!!

ಕೂಡ್ಲಿಗಿ ಪಪಂ ಸಭೆ: ಮೂಲಭೂತ ಸೌಕರ್ಯಗಳಿಗೆ ಆಧ್ಯತೆ,ವಸತಿ ಯೋಜನೆಯಲ್ಲಿ ಪಾರದರ್ಶಕತೆಗೆ ಸೂಚನೆ.

ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣ ಪಂಚಾಯ್ತಿ ಸಭೆ, ಜ19ರಂದು ಪಪಂ ಸಭಾಂಗಣದಲ್ಲಿ ಜರುಗಿತು. ಸಭೆಯಲ್ಲಿ ಪಟ್ಟಣದಲ್ಲಿ ಮೂಲಭೂತ ಸೌಕರ್ಯಗಳನ್ನು, ಸಾರ್ವಜನಿಕರಿಗೆ ಸಮರ್ಪಕವಾಗಿ ಒದಗಿಸಲು ಆಧ್ಯತೆ ನೀಡುವಂತೆ ಅದಿಕಾರಿಗೆ ಸದಸ್ಯರು ತಾಕೀತು ಮಾಡಿದರು. ವಸತಿ ಯೋಜನೆ ಸೇರಿದಂತೆ ಯಾವುದೇ ಯೋಜನೆಗಳ ಅನುಷ್ಠಾನದಲ್ಲಿ, ಎಲ್ಲಾ ಹಂತದಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಬೇಕಿದೆ. ಉತ್ತಮ ಗುಣ ಮಟ್ಟದಲ್ಲಿ ಮನೆಗಳನ್ನು ನಿರ್ಮಾಣ ಮಾಡುಂತೆ, ಅಗತ್ಯ ಕ್ರಮಕ್ಕಾಗಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಸುಮಾರು 16ಕ್ಕೂ ಹೆಚ್ಚು ವಿಷಯಗಳಿಗೆ ಅನುಮೋದನೆ, ಕಾಮಗಾರಿಗಳಿಗೆ ಪ್ರಸ್ಥಾವನೆಗಳ ಕುರಿತು ಚರ್ಚಿಸಲಾಯಿತು. ಕುಡಿಯೋ ನೀರು ಸಮಸ್ಯೆ ಉಲ್ಬಣವಾಗದಂತೆ, ಹಾಗೂ ಸಾಂಕ್ರಾಮಿಕ ರೋಗಗಳು ಹರಡದಂತೆ ಜಾಗ್ರತೆ ವಹಿಸುವಂತೆ ಸರ್ವ ಸದಸ್ಯರು ಒತ್ತಾಯಿಸಿದರು. ಸಭೆಯಲ್ಲಿ ಅಧ್ಯಕ್ಷೆ ಎಮ್.ಶಾರದಾಬಾಯಿ ಅಧ್ಯಕ್ಷತೆಯಲ್ಲಿ ಜರುಗಿತು, ಉಪಧ್ಯಕ್ಷೆ ರೇಣುಕಾ, ಸ್ಥಾಯಿ ಸಮಿತಿ ಅಧ್ಯಕ್ಷ ಪೂರ್ಯಾನಾಯ್ಕ, ಮುಖ್ಯಾಧಿಕಾರಿ ಫಿರೋಜ್ ಖಾನ್ ವೇದಿಕಯಲ್ಲಿದ್ದರು. ಸರ್ವ ಹಾಗೂ ನಾಮ ನಿರ್ಧೇಶಿತ ಸದಸ್ಯರು, ಸಭೆಯಲ್ಲಿ ಉಪಸ್ಥಿತರಿದ್ದರು.

ವರದಿ.ವಿ.ಜಿ.ವೃಷಭೇಂದ್ರ ಕೂಡ್ಲಿಗಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;