;

ಹಟ್ಟಿ ತಿಪ್ಪೇಸ್ವಾಮಿಯ ದೊಡ್ಡ ಜಾತ್ರೆಗೆ ಕ್ಷಣಗಣನೆ ಆರಂಭ…!!!

ಚಿತ್ರದುರ್ಗ- ಚಳ್ಳಕೆರೆ ತಾಲ್ಲೂಕು ನಾಯಕ ನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರೆಯ ದೊಡ್ಡ ರಥೋತ್ಸವ ಮಾರ್ಚ್10 ರಂದು ಶುಕ್ರವಾರ ನಡೆಯಲಿದ್ದು, ಜಾತ್ರೆಗೆ ಅಂತಿಮ ಹಂತದ ಸಿದ್ಧತೆಗಳು ಪೂರ್ಣಗೊಂಡಿದ್ದು, ಹಟ್ಟಿ ತಿಪ್ಪೇಶನ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದೆ.

ಮಧ್ಯಕರ್ನಾಟಕದ ಐತಿಹಾಸಿಕ ನಾಯಕನಹಟ್ಟಿ ಜಾತ್ರೆಗೆ ನಾಡಿನ ಹಲವು ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸುವ ಹಿನ್ನೆಲೆ ಯಲ್ಲಿ ಭಕ್ತಾಧಿಕಾರಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಲಾಗಿದೆ. ಜಾತ್ರೆ ಪ್ರಯುಕ್ತ ನಾಯಕನ ಹಟ್ಟಿ ಪಟ್ಟಣ ನೂತನ ವಧುವಿನಂತೆ ಸಿಂಗಾರಗೊoಡಿದೆ.

ತಿಪ್ಪೇರುದ್ರಸ್ವಾಮಿ ದೇವಾಲಯದ ಒಳಮಠ ಮತ್ತು ಹೊರಮಠದ ಆವರಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿಟ್ಟಿನಲ್ಲಿ ಎರಡೂ ದೇವಾಲಯದ ಆವರಣ ಸ್ವಚ್ಛಗೊಳಿಸಲಾಗಿದೆ. ಬಿಸಿಲಿನ ತಾಪ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಎರಡೂ ದೇವಾಲಯಗಳ ಆವರಣದಲ್ಲಿ ಬೃಹತ್ ಚಪ್ಪರದ ವ್ಯವಸ್ಥೆ ಮಾಡಲಾಗಿದೆ. ಪಟ್ಟಣದ ಎಲ್ಲಾ ವಾರ್ಡ್ ಮತ್ತು ರಸ್ತೆಯ ಇಕ್ಕೆಲಗಳಲ್ಲಿ ವಿದ್ಯುತ್ ದೀಪಾ ಲಂಕಾರ ಮಾಡಲಾಗಿದೆ. ಜತೆಗೆ ಕುಡಿಯುವ ನೀರಿಗೆ ವಿಶೇಷವಾದ ವ್ಯವಸ್ಥೆ ರೂಪಿಸಲಾಗಿದೆ.

ಮೂಲ ಸೌಕರ್ಯದ ವ್ಯವಸ್ಥೆ:-ನಾಯಕನಹಟ್ಟಿ ಪಟ್ಟಣದ ಎಲ್ಲ ವಾರ್ಡ್ಗಳಲ್ಲೂ ರಸ್ತೆ, ಚರಂಡಿ ಸ್ವಚ್ಛ ಗೊಳಿಸಲಾಗಿದೆ. ಅನಾವಶ್ಯಕ ಮುಳ್ಳುಗಳ ಗಿಡ ತೆರವುಗೊಳಿಸಲಾಗಿದೆ. ಪಟ್ಟಣದ ಎಲ್ಲ ವಾರ್ಡ್ಗಳಿಗೆ ನಿರಂತರವಾಗಿ ನೀರು ಸರಬರಾಜು, ಬೀದಿದೀಪ, ಹೈಮಾಸ್ಟ್ ದೀಪಗಳ ವ್ಯವಸ್ಥೆ ಮಾಡಲಾಗಿದೆ. ಜಾತ್ರೆಗೆ ಬರುವ ಭಕ್ತರಿಗೆ ಪಟ್ಟಣದ ಹಲವು ಕಡೆಗಳಲ್ಲಿ ಶೌಚಾಲಯ ವ್ಯವಸ್ಥೆ, ಬಳಸಲು ನೀರಿನ ತೊಟ್ಟಿಗಳು, ಕೊಳವೆ ಬಾವಿಗಳಿಂದ ನಿರಂತರವಾಗಿ ಟ್ಯಾಂರ‍್ಗಳ ಮೂಲಕ ನೀರು ಸರಬರಾಜು ವ್ಯವಸ್ಥೆ, ಚರಂಡಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಫಿನಾಯಿಲ್, ಸೊಳ್ಳೆಗಳ ನಿಯಂತ್ರಣಕ್ಕೆ ಧೂಮೀಕರಣ ವ್ಯವಸ್ಥೆ ಹಮ್ಮಿಕೊಳ್ಳಲಾಗಿದೆ. ಜಾತ್ರೆಗೆ ಬರುವ ಭಕ್ತರಿಗೆ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವ ಬ್ಯಾರ‍್ಗಳ ಅಳವಡಿಕೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ನಾಯಕನಹಟ್ಟಿ ಪಟ್ಟಣ ಪಂಚಾಯಿತಿಯಿoದ ಕೈಗೊಳ್ಳಲಾಗಿದೆ.

ಸುಗಮ ಸಂಚಾರಕ್ಕೆ ವ್ಯವಸ್ಥೆ:-ಜಾತ್ರೆಯಲ್ಲಿ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಪಟ್ಟಣದ 3 ಕಡೆಗಳಲ್ಲಿ ಬಸ್‌ನಿಲ್ದಾಣ ಗಳನ್ನು ಸ್ಥಾಪಿಸಲಾಗಿದೆ. ದಾವಣಗೆರೆ-ಜಗಳೂರು- ಹೊಸಪೇಟೆ ಕಡೆಯಿಂದ ಬರುವ ವಾಹನಗಳಿಗೆ ಪಟ್ಟಣದ ಗಂಗಯ್ಯನಹಟ್ಟಿ ಬಳಿ, ಬಳ್ಳಾರಿಅನಂತಪುರ- ರಾಯದುರ್ಗ- ಕಲ್ಯಾಣದುರ್ಗ ಕಡೆಯಿಂದ ಬರುವ ವಾಹನಗಳಿಗೆ ತಳಕು ರಸ್ತೆಯ ಮದರಾಸದ ಬಳಿ, ಬೆಂಗಳೂರುತುಮಕೂರು- ಚಳ್ಳಕೆರೆ- ಚಿತ್ರದುರ್ಗ ಮಾರ್ಗದಿಂದ ಬರುವವರಿಗೆ ಮನುಮೈನಹಟ್ಟಿ ಏಕಾಂತೇಶ್ವರ ದೇವಾಲಯದ ಬಳಿ ಬಸ್‌ನಿಲ್ದಾಣಗಳನ್ನು ತೆರೆಯಲಾಗಿದೆ.

ಜತೆಗೆ ದೇವಾಲಯದ ಬಳಿ ತೆರಳಲು ಆಟೋರಿಕ್ಷಾಗಳ ವ್ಯವಸ್ಥೆ ಮಾಡಲಾಗಿದೆ. 200 ಜಾತ್ರಾ ವಿಶೇಷ ವಾಹನಗಳ ಕಾರ್ಯಾಚರಣೆ ಶ್ರೀ ಕ್ಷೇತ್ರ ನಾಯಕನಹಟ್ಟಿಯಲ್ಲಿ ಮಾರ್ಚ್ 9 ರಿಂದ 11 ರವರೆಗೆ ಜರುಗಲಿರುವ ಶ್ರೀ ಗುರುತಿಪ್ಪೇರುದ್ರಸ್ವಾಮಿ ರಥೋತ್ಸವದ ಅಂಗ ವಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗದ ವತಿಯಿಂದ ಚಿತ್ರದುರ್ಗ, ಚಳ್ಳಕೆರೆ, ಹೊಸದುರ್ಗ, ಪಾವಗಡ ಘಟಕಗಳಿಂದ ಒಟ್ಟು 200 ಜಾತ್ರಾ ವಿಶೇಷ ವಾಹನಗಳ ಕಾರ್ಯಾಚರಣೆ ಮಾಡಲು ಕ್ರಮಕೈಗೊಳ್ಳಲಾಗಿದೆ.

ವಿಶೇಷ ವಾಹನಗಳ ಕಾರ್ಯಾಚರಣೆ ಮಾರ್ಗ ಇಂತಿದೆ. ಚಿತ್ರದುರ್ಗ-ನಾಯಕನಹಟ್ಟಿ ವಯಾ ಬೆಳಗಟ್ಟ, ಹಾಯ್ಕಲ್, ಚಳ್ಳಕೆರೆ. ಚಳ್ಳಕೆರೆ-ನಾಯಕನಹಟ್ಟಿ ವಯಾ ನೇರ್ಲಗುಂಟೆ. ಹಿರಿಯೂರುನಾಯಕನಹಟ್ಟಿ ವಯಾ ಸಾಣಿಕೆರೆ, ಚಳ್ಳಕೆರೆ, ನೇರ್ಲಗುಂಟೆ. ನಾಯಕನಹಟ್ಟಿ-ಪರಶುರಾಂಪುರ ವಯಾ ಚಳ್ಳಕೆರೆ ಮಾರ್ಗದಲ್ಲಿ ಸಂಚರಿಸಲಿವೆ. ಪ್ರಯಾಣಿಕರ ಜನದಟ್ಟಣೆಗನು ಗುಣವಾಗಿ ಹೆಚ್ಚುವರಿ ವಾಹನ ಕಾರ್ಯಾಚರಣೆ ಮಾಡಲಾಗು ವುದು. ಭಕ್ತಾಧಿಗಳು ವಿಶೇಷ ವಾಹನಗಳ ಸದುಪಯೋಗವನ್ನು ಉತ್ತಮ ರೀತಿಯಿಂದ ಪಡೆದುಕೊಳ್ಳಬೇಕು ಎಂದು ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗ ವಿಭಾಗೀಯ ನಿಯಂತ್ರ ಣಾಧಿಕಾರಿ ತಿಳಿಸಿದ್ದಾರೆ.

ಪ್ರಾಣಿ ಬಲಿ ನಿಷೇಧ:-ಮಾರ್ಚ್ 10 ರಂದು ಜರುಗುವ ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರ ಸ್ವಾಮಿ ಜಾತ್ರೆಯಲ್ಲಿ ಸಂಪೂರ್ಣವಾಗಿ ಪ್ರಾಣಿ ಬಲಿಯನ್ನು ನಿಷೇಧಿ ಸಲಾಗಿದೆ. ಸಾರ್ವಜನಿಕರು ಪ್ರಾಣಿಬಲಿ ಮಾಡಿ ಕಾನೂನು ಉಲ್ಲಂಘಿಸಿದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ಜಾತ್ರೆಯಲ್ಲಿ ಪ್ರಾಣಿಬಲಿ ನಡೆಯುವುದು ಕಂಡುಬoದರೆ ಸಾರ್ವಜನಿಕರು, ಚಿತ್ರದುರ್ಗ ಪೊಲೀಸ್ ಅಧೀಕ್ಷಕರ ದೂರವಾಣಿ ಸಂಖ್ಯೆ : 081942ನೇ ಪುಟಕ್ಕೆ 222781, 9480803101, ಚಳ್ಳಕೆರೆ ಪೊಲೀಸ್ ಉಪ ಅಧೀಕ್ಷಕ ದೂರವಾಣಿ ಸಂಖ್ಯೆ 08195-251010, 9480803121, ಚಳ್ಳಕೆರೆ ಪೊಲೀಸ್ ವೃತ್ತ ನಿರೀಕ್ಷಕರ ದೂರವಾಣಿ ಸಂಖ್ಯೆ 08195-222019, 9480803132, ನಾಯಕನಹಟ್ಟಿ ಆರಕ್ಷಕ ಉಪ ನಿರೀಕ್ಷಕರ ದೂರವಾಣಿ ಸಂಖ್ಯೆ 08190-207408,9480803158 ಸಂಪರ್ಕಿಸಬೇಕೆoದು ವಿನಂತಿ.

ವರದಿ. ಶಶಿಕುಮಾರ್ ಚಳ್ಳಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;