ಮಹಿಳಾ ಕ್ರೀಡಾಕೂಟ ಸ್ಫರ್ಧೆ ಉದ್ಘಾಟಿಸಿದ ಡಿ.ಗೋಪಮ್ಮ
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾರ್ಚ್ 10 : ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರುಗಳ ಸಂಯುಕ್ತ ಆಶ್ರಯದಲ್ಲಿ ಇಂದು ಜಿಲ್ಲೆಯ ಮಹಿಳೆಯರಿಗೆ ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕ್ರೀಡಾಕೂಟಗಳನ್ನು ದೇವನಹಳ್ಳಿ ಪುರಸಭೆ ಅಧ್ಯಕ್ಷರಾದ ಡಿ.ಗೋಪಮ್ಮ ಅವರು ಉದ್ಘಾಟಿಸಿದರು.

ದೇವನಹಳ್ಳಿ ಪುರಸಭೆ ಉಪಧ್ಯಾಕ್ಷರಾದ ಕೆ.ಗೀತಾ ಶ್ರೀಧರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ, ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ, ತಾಲ್ಲೂಕು ಮಟ್ಟದ ಮಹಿಳಾ ಅಧಿಕಾರಿಗಳು, ಸಿಬ್ಬಂದಿ, ಮತ್ತಿತರರು ಉಪಸ್ಥಿತರಿದ್ದರು…

ವರದಿ. ಕಲಾವತಿ, ಎನ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
