ಈಜಲು ಹೋಗಿ ಮೂವರು ಕೆರೆಯಲ್ಲಿ ಮುಳುಗಿ ಸಾವು

ಕೆರೆಯಲ್ಲಿ ಈಜಲು ಹೋದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಮಂಗಳವಾರ ಮಧ್ಯಾಹ್ನ ತಾಲೂಕಿನ ನಂದನಹೊಸೂರು ಗ್ರಾಮದ ಗುಂಡಿಕೆರೆಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಗಳನ್ನು ದ್ವಿತೀಯ ಪಿಯುಸಿ ಓದುತ್ತಿದ್ದ ನಂದನಹೊಸೂರು ಗ್ರಾಮದ ಗಿರೀಶ್(೧೮), ಎಚ್.ಡಿ.ಪುರ ಗ್ರಾಮದ ಸಂಜಯ್(೧೮) ಹಾಗೂ ಕಣಿವೆ ಜೋಗಿಹಳ್ಳಿ ಗ್ರಾಮದ ಮನು (೧೮) ಎಂದು ಗುರುತಿಸಲಾಗಿದೆ. ಮೂವರು ವಿದ್ಯಾರ್ಥಿಗಳು ಎಚ್.ಡಿ.ಪುರ ಗ್ರಾಮದ ಶ್ರೀ ಲಕ್ಷಿö್ಮನರಸಿಂಹಸ್ವಾಮಿ ಪಿಯು ಕಾಲೇಜಿನಲ್ಲಿ ಓದುತ್ತಿದ್ದರು. ನಂದನಹೊಸೂರು ಗ್ರಾಮದ ಗುಂಡಿಕೆರೆಯಲ್ಲಿ ಮೃತರು ಮಧ್ಯಾಹ್ನ ೧ ಗಂಟೆ ಸಮಯದಲ್ಲಿ ಈಜಲು ಹೋಗಿದ್ದಾರೆ. ಮೂವರಲ್ಲಿ ಒಬ್ಬನಿಗೆ ಈಜು ಬರುತ್ತಿದ್ದು, ಇನ್ನಿಬ್ಬರು ಈಜಲು ಬರುತ್ತಿರಲಿಲ್ಲ ಎಂದು ತಿಳಿದುಬಂದಿದೆ. ಆಳವಾದ ಗುಂಡಿ ಬಿದ್ದಿದ್ದ ಜಾಗದಲ್ಲಿ ಈಜುವಾಗ ಒಬ್ಬರನೊಬ್ಬರು ಹಿಡಿದುಕೊಂಡು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೂವರು ಬಡ ಕುಟುಂಬದ ಮಕ್ಕಳು ನೀರು ಪಾಲಾದ ಸುದ್ದಿ ಕೇಳಿ ಇಡೀ ಗ್ರಾಮವೇ ದಿಗ್ಬ್ರಮೆ ವ್ಯಕ್ತಪಡಿಸಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಮಾಜಿ ಸಚಿವ ಗ್ರಾಮಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದ್ದಾರೆ. ಹೊಳಲ್ಕೆರೆ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

ವರದಿ. ಸುರೇಶ್. ಹೊಳಲ್ಕೆರೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
