;

ಬಿಜೆಪಿ ಶಾಸಕ ಎನ್ ವೈ ಗೋಪಾಲಕೃಷ್ಣ ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತ ಎನ್ನಲಾಗಿದೆ!!!!

ಬಿಜೆಪಿ ಶಾಸಕ ಎನ್ ವೈ ಗೋಪಾಲಕೃಷ್ಣ ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತ ಎನ್ನಲಾಗಿದೆ!!!!

ಕೂಡ್ಲಿಗಿ: ಮುಂಬರುವ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ನಡೆಯಲಿದ್ದು, ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಹಾಲಿ ಬಿಜೆಪಿ ಶಾಸಕ ಎನ್ ವೈ ಗೋಪಾಲಕೃಷ್ಣ ಅವರು ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ ಎನ್ನಲಾಗಿದೆ. ಕಾರಣ ಈ ಬಾರಿ ಅವರಿಗೆ ವಯಸ್ಸಿನ ಕಾರಣದಿಂದ ರಾಜ್ಯ ಬಿಜೆಪಿ ಪಕ್ಷದಿಂದ ಟಿಕೆಟ್ ಕೈ ತಪ್ಪುವ ಲಕ್ಷಣಗಳಿದ್ದು ಅದಕ್ಕಾಗಿ ಎನ್ ವೈ ಗೋಪಾಲಕೃಷ್ಣ ಅವರು ಕೂಡ್ಲಿಗಿ ಅಥವಾ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದ ಬಾಗಿಲನ್ನು ತಟ್ಟಿದ್ದಾರೆ ಎನ್ನುವ ಸುದ್ದಿ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದಾದ್ಯಂತ ಹರಿದಾಡುತ್ತಿದೆ, ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಮತ್ತು ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ಹೆಚ್ಚಿದ್ದು ಎರಡು ಪಕ್ಷದಿಂದ ಈ ಬಾರಿ ನಮಗೆ ಟಿಕೆಟ್ ಸಿಗುತ್ತದೆ ಎಂದು ಹಲವರು ಈಗಾಗಲೇ ಕ್ಷೇತ್ರಾದ್ಯಂತ ಓಡಾಡುತ್ತಿರುವುದಕ್ಕೆ ಬ್ರೇಕ್ ಬೀಳುವ ಸಾಧ್ಯತೆಗಳಿವೆ ಕಾರಣ ಹಾಲಿ ಬಿಜೆಪಿ ಶಾಸಕರಾಗಿರುವ ಎನ್ ವೈ ಗೋಪಾಲಕೃಷ್ಣ ಅವರು ಪಕ್ಷಾಂತರ ಮಾಡಿದರೆ ನಿಷ್ಠಾವಂತ ಕಾಂಗ್ರೆಸ್ ಪಕ್ಷದ ಪ್ರಬಲ ಆಕಾಂಕ್ಷಿಗಳಿಗೆ ಬಂಡಾಯದ ಭೀತಿ ಕಾಡುತ್ತಿದೆ ಎನ್ನುತ್ತಾರೆ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಜನರು, ಈಗಾಗಲೇ ಕೆಪಿಸಿಸಿ ಹಲವು ನಾಯಕರುಗಳನ್ನು ಭೇಟಿಯಾಗಿ ಕಾಂಗ್ರೆಸ್ ಸೇರುವುದು ಬಹುತೇಕ ಖಚಿತವಾಗಿದೆ ಎನ್ನಲಾಗಿದೆ…

ವರದಿ. ಬಸಪ್ಪ ಬಣವಿಕಲ್ಲು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;