ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿಗಳ ಭೇಟಿ; ಪರಿಶೀಲನೆ

ಕೊಪ್ಪಳ ಏಪ್ರಿಲ್ : ಕರ್ನಾಟಕ ಲೋಕಸೇವಾ ಆಯೋಗವು ನಡೆಸುವ ಕನ್ನಡ ಭಾಷಾ ಪರೀಕ್ಷೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ಏಪ್ರೀಲ್ 1ರಂದು ಪರೀಕ್ಷಾ ಕೇಂದ್ರವೊಂದಾದ ನಗರದ ಬಾಲಕಿಯರ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ ಪರಿಶೀಲಿಸಿದರು. ಪರೀಕ್ಷಾ ಕೇಂದ್ರದಲ್ಲಿನ ವ್ಯವಸ್ಥೆಯ ಬಗ್ಗೆ ಅವರು ಇದೆ ವೇಳೆ ಮಾಹಿತಿ ಪಡೆದರು.
ಏಪ್ರೀಲ್ 2ರಂದು ಸಾಮಾನ್ಯ ಜ್ಞಾನ ಪತ್ರಿಕೆ-1 ಮತ್ತು ಮಧ್ಯಾಹ್ನ ವೇಳೆ ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲಿಷ್, ಕಂಪ್ಯೂಟರ್ ಜ್ಞಾನ ಪತ್ರಿಕೆ 2ರ ಪರೀಕ್ಷೆಗಳು ನಡೆಯಲಿವೆ.
ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೂ ಭೇಟಿ: ಮಾರ್ಚ 31ರಿಂದ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭಗೊಂಡಿದ್ದು, ಪರೀಕ್ಷಾ ಕೇಂದ್ರವಾದ ಸರ್ಕಾರಿ ಜ್ಯೂನಿಯರ್ ಬಾಲಕರ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು. ವಿದ್ಯಾರ್ಥಿಗಳು ನಿರ್ಭಯದಿಂದ ಪರೀಕ್ಷೆ ಬರೆಯುವಂತೆ ಪರೀಕ್ಷಾ ಕೇಂದ್ರಗಳ ಸುತ್ತಲು ಶಾಂತಿ ಸುವ್ಯವಸ್ಥೆ ಕಾಪಾಡಲು ಕ್ರಮ ವಹಿಸಬೇಕು ಎಂದು ಇದೆ ವೇಳೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು..

ವರದಿ. ಚನ್ನಬಸವರಾಜ್ ಕಳ್ಳಿಮರದ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
