ವಿಧಾನಸಭಾ ಚುನಾವಣೆ ಹಿನ್ನಲೆ: ಭದ್ರತಾ ಪಡೆಯಿಂದ ಪಥ ಸಂಚಲನ

ಕೊಪ್ಪಳ ಏಪ್ರಿಲ್ : ಸಾರ್ವತ್ರಿಕ ವಿಧಾನಸಭಾ ಚುನಾವಣೆ 2023ರ ನಿಮಿತ್ಯ ಕಾನೂನು ಸುವ್ಯವಸ್ಥೆ ಕಾಪಾಡಲು, ಚುನಾವಣೆ ಪ್ರಕ್ರಿಯೆಯು ನ್ಯಾಯಸಮ್ಮತ ಹಾಗೂ ಶಾಂತಿಯುತವಾಗಿ ನಡೆಯಲು ಜಿಲ್ಲಾ ಪೊಲೀಸ್ ಇಲಾಖೆಯಿಂದ ಏಪ್ರಿಲ್ 5ರಂದು ಭದ್ರತಾ ಪಡೆಯ ಪಥಸಂಚಲನ ಜರುಗಿತು.

ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ ಅವರು ಹಸಿರು ನಿಶಾನೆ ತೋರಿಸುವುದರ ಮಾಲಕ ಪಥಸಂಚಲನಕ್ಕೆ ಚಾಲನೆ ನೀಡಿದರು.
ಪಥಸಂಚಲನವು ಕೊಪ್ಪಳ ನಗರದ ಬಸ್ ನಿಲ್ದಾಣದಿಂದ ಪ್ರಾರಂಭಗೊಂಡು, ಅಶೋಕ ವೃತ್ತ, ಜವಾಹರ ರಸ್ತೆ ಮೂಲಕ ಗಡಿಯಾರ ಕಂಭ, ಸಾಲಾರಜಂಗ ರಸ್ತೆ ಮೂಲಕ ಈಶ್ವರ ಪಾರ್ಕವರೆಗೆ ನಡೆಯಿತು. ಪಥಸಂಚಲನದಲ್ಲಿ ಚುನಾವಣೆ ಕರ್ತವ್ಯಕ್ಕೆ ಆಗಮಿಸಿದ ಪ್ಯಾರಾ ಮಿಲಿಟರಿ ತುಕಡಿ ಮತ್ತು ಕೊಪ್ಪಳ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು….

ವರದಿ. ಸಂಗೀತ ಪಾಟೀಲ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
