ಉದ್ದೇಶಿತ ಮಸ್ಟರಿಂಗ್ ಕೇಂದ್ರ ಪರಿಶೀಲಿಸಿದ ಜಿಲ್ಲಾಧಿಕಾರಿ ಆರ್.ಲತಾ
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉದ್ದೇಶಿತ ಮಸ್ಟರಿಂಗ್ ಕೇಂದ್ರಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ಇಂದು ಭೇಟಿ ನೀಡಿ ಕೈಗೊಂಡಿರುವ ಚುನಾವಣಾ ಕಾರ್ಯಗಳ ಪರಿಶೀಲನೆ ನಡೆಸಿದರು.

ಹೊಸಕೋಟೆ ತಾಲ್ಲೂಕು ಕೇಂದ್ರದಲ್ಲಿರುವ 178-ಹೊಸಕೋಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಯವರ ಕಾರ್ಯಾಲಯದ ಸಭಾಂಗಣದಲ್ಲಿ ಸಭೆ ನಡೆಸಿ ಚುನಾವಣೆಯನ್ನು ಸುಗಮವಾಗಿ ನಡೆಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಂಬಂಧಿಸಿದ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು…

ವರದಿ. ಕಲಾವತಿ. ಎನ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
