ಅರೆಸೇನಾ ಭದ್ರತಾ ಪಡೆಯ ಪಥಸಂಚಲನದಲ್ಲಿ ಭಾಗವಹಿಸಿದ ಜಿಲ್ಲಾಧಿಕಾರಿ ಆರ್.ಲತಾ

ಬೆಂಗಳೂರು ಗ್ರಾಮಾಂತರ ಜಿಲ್ಲೆ, : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ಇಂದು 178-ಹೊಸಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಿ, ಅರೆಸೇನಾ ಭದ್ರತಾ ಪಡೆಯಿಂದ ಹೊಸಕೋಟೆ ಟೌನಿನಲ್ಲಿ ನಡೆದ ಪಥ ಸಂಚಲನದಲ್ಲಿ ಭಾಗವಹಿಸಿದ್ದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುರುಷೋತ್ತಮ್ ಸೇರಿದಂತೆ ಅರೆಸೇನಾ ಭದ್ರತಾ ಪಡೆಯ ಎರಡು ತುಕಡಿಗಳಿಂದ ಸುಮಾರು 250 ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹೊಸಕೋಟೆ ನಗರದಲ್ಲಿ ಆರು ಕಿಲೋ ಮೀಟರ್ವರೆಗೆ ಪಥ ಸಂಚಲನ ನಡೆಸಿ ನಿರ್ಭೀತ ಹಾಗೂ ಶಾಂತಿಯುತ ಮತದಾನಕ್ಕೆ ಕರೆಕೊಟ್ಟರು…

ವರದಿ. ಕಲಾವತಿ, ಎನ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
