ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನ ನಿಂಬಳಗೆರೆ ಗ್ರಾಮದಲ್ಲಿ ಗುರುವಾರ ಸಂಜೆ ಅಪಾರ ಭಕ್ತರ ನಡುವೆ ಶ್ರೀ ಕಲ್ಲೇಶ್ವರ ಸ್ವಾಮಿ ರಥೋತ್ಸವ ಸಂಭ್ರದಿಂದ ಜರುಗಿತು.
ದೇವಸ್ಥಾನದಿಂದ ಪಲ್ಲಕ್ಕಿಯ ಭವ್ಯ ಮೆರವಣಿಗೆಯಲ್ಲಿ ಸಾಗಿ ಬಂದ ಸ್ವಾಮಿಯ ಉತ್ಸವ ಮೂರ್ತಿ ರಥಕ್ಕೆ ಪ್ರದಕ್ಷಿಣೆ ಹಾಕಿತು. ಬಗೆ ಬಗೆಯ ಹೂವು, ತಳಿರು, ತೋರಣಗಳಿಂದ ಅಲಕೃತಗೊಂಡಿದ್ದ ರಥಕ್ಕೆ ಪೂಜೆ ನೆರವೇರಿಸಿ, ಸ್ವಾಮಿಯನ್ನು ರಥದಲ್ಲಿ ಪ್ರತಿಷ್ಟಾಪನೆ ಮಾಡಲಾಯಿತು.
ನಂತರ ನಡೆದ ಸ್ವಾಮಿಯ ಪಟ ಗ್ರಾಮದ ಪೂಜಾರಿ ಸಿದ್ದಲಿಂಗಪ್ಪ 55 ಸಾವಿರಕ್ಕೆ ಪಟವನ್ನು ಪಡೆದುಕೊಂಡರು. ನಂತರ ಭಕ್ತರ ಜಯಘೋಷದೊಂದಿಗೆ ರಥೋತ್ಸವ ಚಾಲನೆ ಪಡೆದುಕೊಂಡಿತು. ರಥ ಬೀದಿಯಲ್ಲಿ ನೆರೆದಿದ್ದ ಭಕ್ತರು ರಥಕ್ಕೆ ಬಾಳೆಹಣ್ಣು ಎಸೆದು ಭಕ್ತಿಯಿಂದ ಕೈ ಮುಗಿದರು. ಸಮಾಳ ನಂದಿಕೋಲು, ಮಂಗಳವಾದ್ಯಗಳ ವೈಭವ ರಥೋತ್ಸವ ಮೆರಗು ಹೆಚ್ಚಿಸಿದ್ದವು…

ವರದಿ. ವಿರೇಶ್. ಕೆ. ಎಸ್. ಕಾನಹೋಸಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
