ಸಾವಿರಾರು ಕಾರ್ಯರಕರ್ತರ ಜೋತೆ ನಾಮಪತ್ರ ಸಲ್ಲಿಸಿದ ಗೋವಿಂದ ಕಾರಜೋಳ

ಮುಧೋಳ: ಮುಧೋಳ ಮಿಸಲು ಮತಕ್ಷೇತ್ರದ ಭಾಜಪ ಪಕ್ಷದ ಅಧಿಕೃತ ಅಭ್ಯರ್ಥಿ ಗೋವಿಂದ ಎಮ್ ಕಾರಜೋಳ ಸಾವಿರಾರು ಭಾಜಪ ಕಾರ್ಯಕರ್ತರು ಅಭಿಮಾನಿಗಳು ಜೋತೆಗೂಡಿ ಮೆರವಣಿಗೆ ಮೂಲಕ ತಹಸಿಲ್ದಾರ ಕಛೇರಿಗೆ ತೆರಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ನಾಮ ಪತ್ರ ಸಲ್ಲಿಸಿದರು. ಸತತ ನಾಲ್ಕು ಬಾರಿ ಶಾಸಕರಾಗಿ ಸರ್ಕಾರದಲ್ಲಿ ಹಿರಿಯ ಸಚಿವರಾಗಿ ಕಾರ್ಯ ನಿರ್ವಹಿಸಿ ಮತ್ತೆ ಈ ಬಾರಿ ನಾಮಪತ್ರ ಸಲ್ಲಿಸಿ ಚುನಾವಣೆಯಲ್ಲಿ ಸ್ಪರ್ಧಿಸಲು ಸಜ್ಜಾಗಿದ್ದಾರೆ. 2023ರ ಚುನಾವಣೆ ಕಾವು ಹೆಚ್ಚುತಲೆ ಇದ್ದು ಪಕ್ಷದ ಕಾರ್ಯಕರ್ತರ ಹುಮ್ಮಸ್ಸು ಇಮ್ಮಡಿಯಾಗಿದೆ ಇದೇ ಸಂದರ್ಭದಲ್ಲಿ ಸಚಿವ ಮುರುಗೇಶ ನಿರಾಣಿ,ಸಿದ್ದು ಸವದಿ ಮತ್ತು ಬಿಜೆಪಿ ಮುಖಂಡರು ಕಾರ್ಯಕರ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ವರದಿ.
ಬಸವರಾಜ ನಂದೆಪ್ಪನವರ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
