ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಚಳ್ಳಕೆರೆ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಟಿ ರಘುಮೂರ್ತಿ . ನಾಮಪತ್ರ ಸಲ್ಲಿಕೆ ರ್‍ಯಾಲಿಯಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯದ್ದರು
ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಕ್ಷೇತ್ರದ ಮುಖಂಡರೊಂದಿಗೆ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.
ಇಂದು ಮುಂಜಾನೆ ಚಳ್ಳಕೆರೆ ಕ್ಷೇತ್ರದ ವಿವಿಧ ದೇವಸ್ಥಾನಗಳಿಗೆ ವಿಶೇಷ ಪೂಜೆ ಸಲ್ಲಿಸಿ, ತದನಂತರ ಕಾಂಗ್ರೆಸ್ ಕಚೇರಿಯಿಂದ ಸಾರ್ವಜನಿಕ ರ್‍ಯಾಲಿ ಮೂಲಕ ಬೃಹತ ಮೆರವಣಿಗೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಬಿ.ಎನ್. ಚಂದ್ರಪ್ಪ, ಪುತ್ರಿ ಸಚಿತ್ರ, ಕಾರ್ಯಕರ್ತರು, ಅಭಿಮಾನಿಗಳು, ಆತ್ಮೀಯರು ಹಾಗೂ ಕ್ಷೇತ್ರದ ಮಹಾಜನತೆ ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿ, ಅಭೂತ ಪೂರ್ವ ಬೆಂಬಲ ಸೂಚಿಸಿದರು.
ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ಆಗಮಿಸಿದ ಸಾವಿರಾರು ಕಾರ್ಯಕರ್ತರು ನನ್ನ ಪರವಾಗಿ ಜೈಕಾರ ಮೊಳಗಿಸಿ, ಚಳ್ಳಕೆರೆ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಮತ್ತೊಮ್ಮೆ ಗೆದ್ದು ಬನ್ನಿ ಎಂದು ಪರಶುರಾಂಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಶಿಧರ ರವರು ಕಾಂತ್ ರಾಜ್ ವೈ ರೆಡ್ಡಿಹಳ್ಳಿ ಶಿವಣ್ಣ ಮತ್ತು ಕಾರ್ಯಕರ್ತರು ಶುಭ ಹಾರೈಸಿದರು…

ವರದಿ, ಶಶಿಕುಮಾರ್ ಚಳ್ಳಕೆರೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
