;

ವಿಧಾನಸಭೆ ಚುನಾವಣೆ; ಮಾದರಿ ನೀತಿ ಸಂಹಿತೆ ಉಲ್ಲಂಘನೆ ರೂ.6 ಲಕ್ಷ ನಗದು, 98.59 ಲೀ. ಮದ್ಯ, 4 ಬೈಕ್ ವಶ: ಡಿಸಿ ಮಾಲಪಾಟಿ ಮಾಹಿತಿ…!!!

ವಿಧಾನಸಭೆ ಚುನಾವಣೆ; ಮಾದರಿ ನೀತಿ ಸಂಹಿತೆ ಉಲ್ಲಂಘನೆ
ರೂ.6 ಲಕ್ಷ ನಗದು, 98.59 ಲೀ. ಮದ್ಯ, 4 ಬೈಕ್ ವಶ: ಡಿಸಿ ಮಾಲಪಾಟಿ ಮಾಹಿತಿ
ಬಳ್ಳಾರಿ,:
ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ಕಾರ್ಯಾಚರಣೆ ಮುಂದುವರೆದಿದ್ದು, ಶನಿವಾರದಂದು 6 ಲಕ್ಷ ರೂ. ನಗದು ಹಣ ಮತ್ತು 41,598 ರೂ. ಮೌಲ್ಯದ 98.59 ಲೀಟರ್ ಮದ್ಯ ಹಾಗೂ ಸಾಗಾಣಿಕೆಗೆ ಬಳಸಿದ್ದ 4 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ.
ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮೂವರು ಚುನಾವಣಾ ವೆಚ್ಚ ವೀಕ್ಷಕರು, 51 ಫ್ಲೈಯಿಂಗ್ ಸ್ಕಾಡ್ , 27 ಎಸ್‍ಎಸ್‍ಟಿ ತಂಡ ಹಾಗೂ 7 ಅಬಕಾರಿ ತಂಡಗಳು ಕಾರ್ಯಪ್ರವೃತ್ತವಾಗಿ ತಪಾಸಣೆ ನಡೆಸುತ್ತಿವೆ.
ಶನಿವಾರ, ಅಬಕಾರಿ ಇಲಾಖೆಯಿಂದ 41,598 ರೂ. ಮೌಲ್ಯದ 98.58 ಲೀಟರ್ ಮದ್ಯ ವಶಪಡಿಸಿಕೊಂಡಿದ್ದು, ಸಾಗಾಣಿಕೆಗೆ ಬಳಕೆ ಮಾಡಿದ್ದ 4 ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
91-ಕಂಪ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುರುಗೋಡಿನಲ್ಲಿ ಎಫ್‍ಎಸ್‍ಟಿ ತಂಡದ ಅಧಿಕಾರಿಗಳು ಸೂಕ್ತ ದಾಖಲೆಗಳಿಲ್ಲದ ರೂ.6 ಲಕ್ಷ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ, ಪರಿಶೀಲನೆಗಾಗಿ ಸಮಿತಿಯ ಮುಂದೆ ಹಾಜರುಪಡಿಸಿದ್ದು, ಚುನಾವಣಾಧಿಕಾರಿಗಳ ಸಮಕ್ಷಮದಲ್ಲಿ ಖಜಾನೆಯಲ್ಲಿರಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ…

ವರದಿ. ಉಮೇಶ್, ಎಚ್, ಬಳ್ಳಾರಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;