ಮಾಜಿ ಪ್ರಧಾನಿ ದೇವೇಗೌಡರ ಹುಟ್ಟುಹಬ್ಬ ಆಚರಣೆ
ಕೂಡ್ಲಿಗಿ: ಬಯಸದೇ ಇದ್ದರೂ, ಗೌರವಾನ್ವಿತ ಪ್ರಧಾನಿ ಹುದ್ದೆಯನ್ನು ಅಲಂಕರಿಸಿದ ದೇವೆಗೌಡರು ನಮ್ಮ ರಾಜ್ಯದ ಹೆಮ್ಮೆಯ ಮಣ್ಣಿನ ಮಗನಾಗಿದ್ದಾರೆ ಎಂದು ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷ ಬ್ಯಾಳಿ ವಿಜಯಕುಮಾರ್ ಗೌಡ ಬಣ್ಣಿಸಿದರು. ಮಾಜಿ ಪ್ರಧಾನಿ ಹೆಚ್.ಡಿ. ದೇವೆಗೌಡರ 91ನೇ ಹುಟ್ಟು ಹಬ್ಬದ ಅಂಗವಾಗಿ ಗುರುವಾರದಂದು ಕೂಡ್ಲಿಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬ್ರೆಡ್,ಹಣ್ಣುಗಳನ್ನು ವಿತರಿಸಿ ಮಾತನಾಡಿದರು. ತೃತೀಯ ರಂಗದ ನಾಯಕತ್ವ ವಹಿಸಲು ಮತ್ತು ಪ್ರಧಾನಮಂತ್ರಿ ಗದ್ದುಗೆಗೇರುವ ಆವಕಾಶ ಒದಗಿ ಬಂದಾಗ ಇಡೀ ರಾಜ್ಯವೇ ಹಬ್ಬದೋಪಾದಿಯಲ್ಲಿ ಸಂಭ್ರಮಪಟ್ಟಿತು. ದೇಶ ಕಂಡ 11ನೇ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಮೇ 30, 1996ರಂದು ರಾಜ್ಯದ ಮುಖ್ಯಮಂತ್ರಿ ಹುದ್ದೆಗೆ ದೇವೆಗೌಡರು ರಾಜೀನಾಮೆ ನೀಡಿದರು ಎಂದರು. ಸರಳ ಕೃಷಿ ಕುಟುಂಬದ ಹಿನ್ನೆಲೆಯಿಂದ ಬಂದ ದೇವೇಗೌಡರು ಮೇ18, 1933ರಂದು ರಾಜ್ಯದ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಗ್ರಾಮದಲ್ಲಿ ಜನಿಸಿದ್ದಾರೆ. ಸಿವಿಲ್ ಎಂಜಿನಿಯರಿಂದ ಡಿಪ್ಲೊಮಾ ವ್ಯಾಸಂಗ ಮಾಡಿದ ಗೌಡರು 20ವರ್ಷದ ಯುವಕನಾಗಿದ್ದಾಗಲೇ ಸಕ್ರಿಯ ರಾಜಕಾರಣಕ್ಕೆ ಧುಮುಕಿದರು. 1953ರಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಿ 1962ರ ತನಕ ಸದಸ್ಯರಾಗಿ ಉಳಿದಿದ್ದರು. ರೈತನ ಬದುಕಿನ ಕಷ್ಟಗಳು ಚೆನ್ನಾಗಿ ಅರಿತವರಾಗಿದ್ದಾರಿಂದ, ಬಡ ರೈತರು, ಸೌಲಭ್ಯ ವಂಚಿತರು ಹಾಗೂ ಸಮಾಜದ ದುರ್ಬಲ ವರ್ಗಗಳ ಒಳಿತಿಗಾಗಿ ತಾವೊಬ್ಬ ಹೋರಾಟಗಾರನಾಗಿ ಗುರುತಿಸಿಕೊಂಡು ಪ್ರಜಾಸತ್ತಾತ್ಮಕ ವ್ಯವಸ್ಥೆಯ ಕೆಳ ಸ್ತರದಿಂದ ಆರಂಭಿಸಿದ ಇವರ ಹೋರಾಟದ ಬದುಕು ರಾಜಕೀಯ ರಂಗದಲ್ಲಿ ಗಮನಸೆಳೆಯುತು ಎಂದರು. ಈ ಸಂದರ್ಭದಲ್ಲಿ ಪಜಾ/ಪಪಂ ಘಟಕದ ಅಧ್ಯಕ್ಷ ಗುಪ್ಪಾಲ್ ಕಾರಪ್ಪ, ತಾ.ಘ. ಎಸ್ಟಿ ಅಧ್ಯಕ್ಷ ಚಿರತಗುಂಡ ಮಾರಪ್ಪ, ಯುವ ಘಟಕದ ಅಧ್ಯಕ್ಷ ಮಾಳಗಿ ರಾಘವೇಂದ್ರ, ಪಪಂ ಸ್ಥಾಯಿ ಸಮಿತಿ ಅಧ್ಯಕ್ಷ ಪೂರ್ಯಾನಾಯ್ಕ್, ಪಪಂ ಸದಸ್ಯರಾದ ತಳಾಸ್ ವೆಂಕಟೇಶ್, ಮುಂತಾದವರು ಉಪಸ್ಥಿತರಿದ್ದರು…

ವರದಿ. ವಿರೇಶ್. ಕೆ, ಎಸ್, ಕಾನಹೋಸಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
