;

ಕೂಡ್ಲಿಗಿ ಮತ ಕ್ಷೇತ್ರದ ನೂತನ ಶಾಸಕರಿಗೆ ಅಭಿನಂದನೆ ಸಲ್ಲಿಸಿದ ಎಎಪಿ ಅಭ್ಯರ್ಥಿಯಾಗಿದ್ದ ನಾರಿ ಶ್ರೀನಿವಾಸ್!!!!!

ಕೂಡ್ಲಿಗಿ ಮತ ಕ್ಷೇತ್ರದ ನೂತನ ಶಾಸಕರಿಗೆ ಅಭಿನಂದನೆ ಸಲ್ಲಿಸಿದ ಎಎಪಿ ಅಭ್ಯರ್ಥಿಯಾಗಿದ್ದ ನಾರಿ ಶ್ರೀನಿವಾಸ್!!!!!
ಕೂಡ್ಲಿಗಿ: ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿದ್ದ ನಾರಿ ಶ್ರೀನಿವಾಸ್ ಅವರು ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಡಾ.ಎನ್.ಟಿ. ಶ್ರೀನಿವಾಸ್  ಅವರನ್ನು ಬೆಂಗಳೂರಿನ ಶಾಸಕರ ಭವನದಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ಹಾಗೂ ಕೂಡ್ಲಿಗಿ ಕ್ಷೇತ್ರದ ಅಭಿವೃದ್ಧಿ ಹಾಗೂ ಮೂಲಭೂತ ಸೌಲಭ್ಯಗಳ ಕುರಿತು ಸಲಹೆ ಸೂಚನೆ ನೀಡಿದರು , ಮಂಗಳವಾರ ವಿಧಾನಸೌಧದ ಶಾಸಕರ ಭವನದಲ್ಲಿ ಕೂಡ್ಲಿಗಿ ವಿಧಾನಸಭಾ ಚುನಾವಣೆಯ ಎಎಪಿ ಅಭ್ಯರ್ಥಿಯಾಗಿದ್ದ ನಾರಿ ಶ್ರೀನಿವಾಸ್ ಅವರು ನೂತನ ಶಾಸಕರನ್ನು ಕೈಕುಲಕಿ ಆತ್ಮೀಯವಾಗಿ ಮಾತನಾಡಿಸಿ ಅಭಿನಂದನೆ ತಿಳಿಸಿದ ಅವರು ಪ್ರಜಾಪ್ರಭುತ್ವದಲ್ಲಿ ಮತದಾರರು ನೀಡಿದ ತೀರ್ಪಿಗೆ ಪರಾಜಿತ ಅಭ್ಯರ್ಥಿಗಳು ತಲೆಬಾಗಲೇಬೇಕು ಈ ಬಾರಿ ಕೂಡ್ಲಿಗಿ ಕ್ಷೇತ್ರದಲ್ಲಿ ಯಾವ ಪಕ್ಷದವರ ವಿರುದ್ಧ ಅವೇಳನಕಾರಿ ಭಾಷಣ ಮಾಡದೆ ಎಲ್ಲಾ ಅಭ್ಯರ್ಥಿಗಳು ಆರೋಗ್ಯಕರ ಚುನಾವಣೆ ನಡೆಸಿದ್ದು ಸಂತಸ ತಂದಿದೆ ಅಲ್ಲದೆ ಕೂಡ್ಲಿಗಿ ಮತಕ್ಷೇತ್ರವು ಬಹಳ ಹಿಂದುಳಿದ ತಾಲೂಕಾಗಿದ್ದು, ಮಳೆಯಾಶ್ರಿತ ಪ್ರದೇಶವಾಗಿರುವುದರಿಂದ ಕೆರೆ ನೀರು ತುಂಬಿಸುವ ಯೋಜನೆ, ಪೂರ್ಣ ಪ್ರಮಾಣದಲ್ಲಿ ಮುಗಿದರೆ ರೈತರ ಮುಖದಲ್ಲಿ ಮಂದಹಾಸ ಮೂಡಿ ರೈತರ ಬಾಳು ಹಸನಾಗುತ್ತದೆ. ಅಲ್ಲದೆ ಈ ಕ್ಷೇತ್ರದಲ್ಲಿ ಯುವಕರಿಗೆ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕೈಗಾರಿಕಾ ಕಾರ್ಖಾನೆಗಳನ್ನು ತೆರೆದರೆ ಇಲ್ಲಿನ ಸ್ಥಳೀಯ ಯುವಕರಿಗೆ ಸ್ಥಳೀಯವಾಗಿ ಉದ್ಯೋಗ ನೀಡಿದಂತಾಗುತ್ತದೆ ಎಂದು ನೂತನ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಅವರಿಗೆ ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಕೂಡ್ಲಿಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ ಗುರುಸಿದ್ದನಗೌಡ್ರು, ಮಹಿಳಾ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿಂಕಾಲ್ ನಾಗಮಣಿ ಇದ್ದರು..

ವರದಿ. ಬಸಪ್ಪ ಬಣವಿಕಲ್ಲು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;