ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸಿ ಕಾರ್ಯನಿರ್ವಹಿಸಿ ಶೇಖ್ ತನ್ವೀರ್ ಆಸಿಫ್
ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸಿ ಕಾರ್ಯನಿರ್ವಹಿಸಿ. ಸರ್ಕಾರದ ಯೋಜನೆಗಳನ್ನು ನಿಯಮಗಳನ್ವಯ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರು ತಿಳಿಸಿದರು.
ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.
ಅಧಿಕಾರಿಗಳು ಕ್ಷೇತ್ರ ಪ್ರವಾಸ ಕೈಗೊಂಡು ಜನರ ಸಮಸ್ಯೆಗಳನ್ನು ಅರಿತು ಯೋಜನೆ ಅನುಷ್ಠಾನಕ್ಕೆ ತೊಂದರೆ ಇದ್ದಲ್ಲಿ ಪರಿಹರಿಸಬೇಕು ಎಂದರು.
ಅಧಿಕಾರಿಗಳು ಸರಿಯಾದ ಸಮಯಕ್ಕೆ ಕಚೇರಿ ಹಜರಾಗಬೇಕು. ಪಂಚಾಯಿತಿ ಹಂತದಲ್ಲಿ ನಡೆಯುವ ಸಭೆಗೆ ತಪ್ಪದೇ ಹಾಜರಾಗಿ ಜನರಿಗೆ ಯೋಜನೆಗಳ ಬಗ್ಗೆ ಮಾಹಿತಿ ನೀಡಿ ತಡ ಮಾಡದೇ ಯೋಜನೆಗಳನ್ನು ಅನುಷ್ಠಾನ ಮಾಡಬೇಕು ಎಂದರು.
ಇ.ಸ್ವತ್ತು ಕುರಿತಂತೆ ಬಹಳಷ್ಟು ದೂರುಗಳು ಜಿಲ್ಲಾ ಪಂಚಾಯತ್ ಕಚೇರಿಗೆ ಬರುತ್ತಿದೆ. ಈ ಕುರಿತಂತೆ ಮೊದಲ ಹಂತದಲ್ಲಿಸರ್ಕಾರಿ ಕಚೇರಿಗಳಿಗೆ ಸಂಬಂಧಿಸಿದಂತೆ ಇ.ಸ್ವತ್ತು ಸೇರ್ಪಡೆಗೆ ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ. ಸಾರ್ವಜನಿಕರಿಂದ ಬಂದಿರುವ ಅರ್ಜಿಗಳನ್ನು ಶೀಘ್ರ ವಿಲೇವಾರಿಗೆ ಸೂಚನೆ ನೀಡಲಾಗಿದೆ ಎಂದರು.
ತೆರಿಗೆ, ಪಂಚತಂತ್ರ, ಜೆ.ಜೆ.ಎಮ್ , ಎಸ್.ಬಿ.ಎಂ., ನರೇಗಾ ವಿಷಯಗಳ ಪ್ರಗತಿ ಪರಿಶೀಲನೆ ನಡೆಸಿ,
ಮನರೇಗಾ ಕುರಿತಂತೆ ಮಾನವ ದಿನಗಳ ರಚನೆ, ಪ್ರಾರಂಭಿಸಿರುವ ಕಾಮಗಾರಿ ಪೂರ್ಣಗೊಳಿಸುವುದು ಎಂದರು.ಸಭೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ ಕೆಲಸಗಳ ಬಗ್ಗೆ ನಿರ್ದೇಶನಗಳನ್ನು ನೀಡಲಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರ ಪ್ರವಾಸ ಕೈಗೊಂಡು ಕಚೇರಿವಾರು ಪರಿಶೀಲನೆ ನಡೆಸಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾರ್ಯಕ್ರಮ ಅನುಷ್ಠಾನ ದಲ್ಲಿ ಗಣನೀಯ ಸಾಧನೆ ಮಾಡಿದ 7 ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಗಾಂಧಿ ಗ್ರಾಮ ಪುರಸ್ಕಾರ ನೀಡಿ ಗೌರವಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಂಜೀವಪ್ಪ, ಯೋಜನಾ ನಿರ್ದೇಶಕ ಧನರಾಜ್ ಬೋರಾಳೆ, ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು..
ವರದಿ. ಸುರೇಶ್. ಮಂಡ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

