ತಂಬಾಕು ವ್ಯಸನದಿಂದ ಕ್ಯಾನ್ಸರ್ ಸೇರಿದಂತೆ ವಿವಿಧ ಅನಾರೋಗ್ಯ ಸಮಸ್ಯೆಗಳು ಉಂಟಾಗುತ್ತದೆ: ಡಾ.ಹೆಚ್ ಎನ್ ಗೋಪಾಲಕೃಷ್ಣ…!!!

ತಂಬಾಕು ವ್ಯಸನದಿಂದ ಕ್ಯಾನ್ಸರ್ ಸೇರಿದಂತೆ ವಿವಿಧ ಅನಾರೋಗ್ಯ ಸಮಸ್ಯೆಗಳು ಉಂಟಾಗುತ್ತದೆ: ಡಾ.ಹೆಚ್ ಎನ್ ಗೋಪಾಲಕೃಷ್ಣ

ತಂಬಾಕು ಉತ್ಪನ್ನಗಳ ಸೇವೆನೆಯಿಂದ ಕ್ಯಾನ್ಸರ್ ಸೇರಿದಂತೆ ವಿವಿಧ ಅನಾರೋಗ್ಯ ಸಮಸ್ಯೆಗಳು ಉಂಟಾಗುತ್ತದೆ. ತಂಬಾಕು ಸೇವನೆಯ ದುಷ್ಪರಿಣಾಮ ಕುರಿತು ಶಾಲಾ ಕಾಲೇಜುಗಳ ಆವರಣಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ:ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಕೃಷಿ ವಿಶ್ವವಿದ್ಯಾಲಯದ ಸಹಭಾಗಿತ್ವದಲ್ಲಿ ವಿ.ಸಿ.ಫಾರಂನ ಆವರಣದಲ್ಲಿಂದು ನಡೆದ ವಿಶ್ವ ತಂಬಾಕು ರಹಿತ ದಿನ-2023ರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿಶ್ವ ತಂಬಾಕು ರಹಿತ ದಿನವನ್ನು ತಂಬಾಕು ಸೇವನೆಯ ಹಾನಿಕಾರಕ ಪರಿಣಾಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮತ್ತು ತಂಬಾಕು ಸೇವನೆಯನ್ನು ಕಡಿಮೆ ಮಾಡಲು ವಿಶ್ವ ಆರೋಗ್ಯ ಸಂಸ್ಥೆಯ ನೇತೃತ್ವದಲ್ಲಿ ನಮಗೆ ಆಹಾರ ಬೇಕು ತಂಬಾಕಲ್ಲ ಎಂಬ ಈ ವರ್ಷದ ಘೋಷ ವಾಕ್ಯದಲ್ಲಿ ಈ ದಿನವನ್ನು ಜಾಗತಿಕ ಮಟ್ಟದಲ್ಲಿ ಆಚರಣೆ ಮಾಡಲಾಗುತ್ತಿದೆ ಎಂದರು.

ರಾಜ್ಯದಲ್ಲಿ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ತಂಬಾಕು ಉತ್ಪನ್ನಗಳನ್ನು ಬಳಸುತ್ತಿದ್ದಾರೆ‌. ಜನರು ಒಂದಲ್ಲ ಒಂದು ರೀತಿಯ ತಂಬಾಕು ಉತ್ಪನ್ನಗಳನ್ನು ಬಳಸಿ ಅನಾರೋಗ್ಯ ಪೀಡಿತರಾಗುತ್ತಿದ್ದಾರೆ ಇದನ್ನು ತಪ್ಪಿಸಬೇಕಿದೆ ಎಂದರು‌.

ಇತ್ತೀಚಿನ ದಿನಗಳಲ್ಲಿ ತಂಬಾಕಿನ ದುಷ್ಪರಿಣಾಮದ ಬಗ್ಗೆ ತಿಳಿದ್ದಿದ್ದರು ಜನರು ತಂಬಾಕನ್ನು ಬಳಸಿ ಕ್ಯಾನ್ಸರ್ ಕಾಯಿಲೆಗಳಿಂದ ಬಳಲುತ್ತಿದ್ದಾರೆ.

ಕರ್ನಾಟಕದಲ್ಲಿ 50 ಸಾವಿರಕ್ಕೂ ಮಿಗಿಲಾಗಿ ತಂಬಾಕು ಬೆಳೆಗಾರರಿದ್ದಾರೆ. ಕೃಷಿ ಇಲಾಖೆ ವತಿಯಿಂದ ತಂಬಾಕು ಬೆಳೆಗಾರರಿಗೆ ಮಾಹಿತಿ ನೀಡಿ ತಂಬಾಕಿನ ದುಷ್ಪರಿಣಾಮಗಳ ಬಗ್ಗೆ ತಿಳಿಸಿ ತಂಬಾಕು ಬೆಳೆಯನ್ನು ಬೆಳೆಯದಂತೆ ಅರಿವು ಮೂಡಿಸಿ ತಂಬಾಕಿನ ಬದಲು ಪರ್ಯಾಯ ಬೆಳೆ ಯಾವುದೆಂದು ಬೆಳೆಗಾರರಿಗೆ ತಿಳಿಸಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಧನಂಜಯ್, ಲೇಖಕರಾದ ಡಾ:ನಂದಿನಿ ಮೂರ್ತಿ, ಕೃಷಿ ವಿದ್ಯಾಲಯದ ಪ್ರಾಂಶುಪಾಲರಾದ ಡಾ.ಫಾತಿಮಾ, ಜಿಲ್ಲಾ ಕಾರಾಗೃಹ ಅಧಿಕ್ಷಕರಾದ ಲೋಕೇಶ್ ಟಿ.ಕೆ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ‌.ಸಂಜಯ್ ಸೇರಿದಂತೆ ಇನ್ನಿತರರು ಹಾಜರಿದ್ದರು…

ವರದಿ. ಸುರೇಶ್. ಮಂಡ್ಯ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend