ಆರೋಗ್ಯ ಮತ್ತು ನೈರ್ಮಲ್ಯ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ
ಕಾನ ಹೊಸಹಳ್ಳಿ: ಗುಡೆಕೋಟೆ ಹೋಬಳಿ ವ್ಯಾಪ್ತಿಯ ಗಂಡ ಬೊಮ್ಮನಹಳ್ಳಿ ಗ್ರಾಮ ಪಂಚಾಯಿತಿಗೆ ಯೋಜನಾಧಿಕಾರಿಗಳಾದ ಅಶೋಕ್ ತೋಟದ್ ಅವರು ಗ್ರಾಮಗಳಿಗೆ ಭೇಟಿ ನೀಡಿ ಗ್ರಾಮಗಳಲ್ಲಿ ಚರಂಡಿ ಸ್ವಚ್ಛತೆ ಮತ್ತು ಎಸ್.ಬಿ.ಎಂ ಯೋಜನೆಯಲ್ಲಿ ವೈಯಕ್ತಿಕ ಶೌಚಾಲಯ ಕಟ್ಟಿಕೊಳ್ಳಲು ಹಾಗೂ ನರೇಗಾ ಯೋಜನೆಯಲ್ಲಿ ಧನದ ದೊಡ್ಡಿ, ಕುರಿದೊಡ್ಡಿ ವೈಯಕ್ತಿಕ ಕಾಮಗಾರಿ ನಿರ್ಮಿಸಿಕೊಳ್ಳಲು ಸಲಹೆ ನೀಡಿದರು. ಗ್ರಾಮಗಳಲ್ಲಿ ರಂಡಿ ಸ್ವಚ್ಛತೆ ಮತ್ತು ಕುಡಿಯೋ ನೀರಿನ ಟ್ಯಾಂಕುಗಳನ್ನು ಸ್ವಚ್ಛತೆ ಮಾಡಲು ಸಲಹೆ ನೀಡಿದರು. ಆರೋಗ್ಯ ಮತ್ತು ನೈರ್ಮಲ್ಯ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ, ನೈರ್ಮಲ್ಯ ಇರುವಲ್ಲಿ ಆರೋಗ್ಯ ಇರುತ್ತದೆ. ನೈರ್ಮಲ್ಯದ ಕೊರತೆ ಇದ್ದಲ್ಲಿ ಆರೋಗ್ಯದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಸ್ವಚ್ಛತೆಯಲ್ಲಿ ಹಲವು ವಿಧಗಳಿವೆ. ಅವುಗಳಲ್ಲಿ ಮುಖ್ಯವಾದುದು ವೈಯುಕ್ತಿಕ ಸ್ವಚ್ಛತೆ ಅಥವಾ ನಮ್ಮ ದೇಹದ ಸ್ವಚ್ಛತೆ. ನಾವು ತಿನ್ನುವ ಆಹಾರ, ನಮ್ಮ ದೇಹವನ್ನು ಸ್ವಚ್ಛವಾಗಿಡುವ ರೀತಿ, ದೈಹಿಕ ವ್ಯಾಯಾಮ ಇವೆಲ್ಲವೂ ದೇಹದ ಉತ್ತಮ ಆರೋಗ್ಯವನ್ನು ಕಾಪಾಡುವಲ್ಲಿ ಹೆಚ್ಚಿನ ಪಾತ್ರವನ್ನು ವಹಿಸುತ್ತವೆ. ವೈಯಕ್ತಿಕ ನೈರ್ಮಲ್ಯದ ಕೊರತೆ ಮನುಷ್ಯನು ಅನೇಕ ರೋಗಗಳಿಗೆ ತುತ್ತಾಗಲು ಕಾರಣವಾಗುತ್ತದೆ. ಉದಾಹರಣೆಗೆ, ಅತಿಸಾರ ಭೇದಿ, ಹುಳುಗಳು, ಟೈಫಾಯ್ಡ್, ಚರ್ಮದ ಸೋಂಕುಗಳು, ಹಲ್ಲಿನ ಸಮಸ್ಯೆಗಳು ಇತ್ಯಾದಿ. ವೈಯಕ್ತಿಕ ಶುಚಿತ್ವವನ್ನು ಅಭ್ಯಾಸ ಮಾಡುವುದರಿಂದ ಈ ಎಲ್ಲ ರೋಗಗಳಿಗೆ ತುತ್ತಾಗುವುದನ್ನು ನಾವು ತಡೆಗಟ್ಟಬಹುದು. ಈ ವೇಳೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ರಾಮಕೃಷ್ಣಪ್ಪ, ಕಾರ್ಯದರ್ಶಿ ಈಶ್ವರಯ್ಯ ಸ್ವಾಮಿ, ಸಿಬ್ಬಂದಿ ವರ್ಗದವರು, ಶಾಲೆಯ ಶಿಕ್ಷಕರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು…

ವರದಿ. ವಿರೇಶ್. ಕೆ. ಎಸ್. ಕಾನಹೋಸಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
