.ಎಸ್.ಆರ್.ಟಿ.ಸಿ. ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಬೈಕ್ ಸವಾರ ಸ್ಥಳದಲ್ಲೇ ಸಾವು…!!!

ಯಲ್ಲಾಪುರ : ತಾಲೂಕಿನ ಶಿರಸಿ ರಸ್ತೆಯ ಬೇಡ್ತಿ ಸೇತುವೆ ಬಳಿ ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ರವಿವಾರ ಮಧ್ಯಾಹ್ನದ ವೇಳೆ ಸಂಭವಿಸಿದೆ.

ದಾವಣಗೆರೆ ಮೂಲದವರಾದ ಸವಾರರು ಒಂದೇ ಬೈಕ್ ನಲ್ಲಿ ಮೂವರು ಪ್ರಯಾಣಿಸುತ್ತಿದ್ದು, ಕೆಎಸ್ಆರ್ಟಿಸಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಿರಣ್ ದಿವಾಕರ್ ಎನ್ನುವವರು ಸ್ಥಳದಲ್ಲೇ ಮೃತಪಟ್ಟಿರುತ್ತಾರೆ. ಇನ್ನೀರ್ವರು ಗಂಭೀರ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ…

ವರದಿ. ಸುರೇಶ್ ಹೊಳಲ್ಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend