;

ಸಚಿವರಿಂದ ವೈಯಕ್ತಿಕ ಪರಿಹಾರ ವಿತರಣೆ…!!!

ಸಚಿವರಿಂದ ವೈಯಕ್ತಿಕ ಪರಿಹಾರ ವಿತರಣೆ

ನಾಲೆಗಳ ಬಳಿ ಅಪಘಾತ ಸ್ಥಳಗಳನ್ನು ಗುರುತಿಸಿ ತಡೆಗೋಡೆ ನಿರ್ಮಿಸಲು ರೈತರು, ಶಾಸಕರು, ಸಂಘಟನೆಗಳು ಒಟ್ಟಾಗಿ ಸೇರಿ ಚಿಂತಿಸಬೇಕಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.

ಅವರು ಇಂದು ಮಿಮ್ಸ್ ನಲ್ಲಿ ಶ್ರೀರಂಗಪಟ್ಟಣ ತಾಲ್ಲೂಕಿನ ಗಾಮನಹಳ್ಳಿ ಬಳಿ‌ ಇರುವ ನಾಲೆಗೆ ಕಾರು ಪಲ್ಟಿ ಒಡೆದು ಮೃತಪಟ್ಟವರ ಅಂತಿಮ ದರ್ಶನ ಪಡೆದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಕುಟುಂಬಸ್ಥರಿಗೆ ವೈಯಕ್ತಿಕವಾಗಿ 50,000/- ರೂ ಪರಿಹಾರ ನೀಡಿ ಮಾತನಾಡಿದರು.

ಅಪಘಾತ ಉಂಟಾಗಬಹುದಾದ ಸ್ಥಳಗಳನ್ನು ಗುರುತಿಸಿ
ಕ್ರಮಕೈಗೊಳ್ಳುವಂತೆ ಜುಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ತಿಳಿಸಲಾಗಿದೆ ಎಂದರು.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೆಚ್ಚಿನ ಅಪಘಾತವಾಗುತ್ತಿತ್ತು, ಪೊಲೀಸ್ ಇಲಾಖೆ, ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಹಲವಾರು ಸಭೆ ನಡೆಸಿ ಕ್ರಮ ಕೈಗೊಂಡು ಅಪಘಾತಗಳ ಸಂಖ್ಯೆ ಕಡಿಮೆಯಾಗಿದೆ ಎಂದರು.

ಇದೇ ಸಂದರ್ಭದಲ್ಲಿ ‌ಶಾಸಕರಾದ ರವಿಕುಮಾರ್, ರಮೇಶ್ ಬಾಬು ಬಂಡೀಸಿದ್ದೇಗೌಡ, ಜಿಲ್ಲಾಧಿಕಾರಿ ಡಾ: ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್, ಮಿಮ್ಸ್ ನಿರ್ದೇಶಕ ಡಾ: ಮಹೇಂದ್ರ ಉಪಸ್ಥಿತರಿದ್ದರು..

ವರದಿ. ಸುರೇಶ್ ಮಂಡ್ಯ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;