ಸರ್ಕಾರಿ ಶಾಲೆಯ ಮಕ್ಕಳಿಗೆ ಸಣ್ಣ ಕಥೆ ಬರೆಯುವ ಅಭಿಯಾನ ಕಾರ್ಯಕ್ರಮ ……. ಕೊಟ್ಟೂರು: ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ , ಮಾನ್ಯ ಆಯುಕ್ತರು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ಬೆಂಗಳೂರು ರವರು ಪ್ರಸ್ತುತ ಸರ್ಕಾರಿ ಶಾಲೆಯ ಮಕ್ಕಳ ಶಿಕ್ಷಣ ಮಟ್ಟ ಮತ್ತು ಸೃಜನಶೀಲತೆಯನ್ನು ವೃದ್ಧಿಸಲು ಸಹಕಾರಿಯಾಗುವಂತೆ ಓದುವ ಬೆಳಕು ಕಾರ್ಯಕ್ರಮದ ಅಡಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಯೋಗದೊಂದಿಗೆ ಸರ್ಕಾರಿ ಶಾಲೆಯ ಮಕ್ಕಳಿಗೆ ಸಣ್ಣ ಕಥೆ ಬರೆಯುವ ಅಭಿಯಾನವನ್ನು ಕೆ.ಅಯ್ಯನಹಳ್ಳಿ ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಆಯೋಜಿಸಲಾಗಿತ್ತು , ಸಣ್ಣ ಕಥೆ ಬರೆಯುವ ಅಭಿಯಾನದಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು . ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರು , ಪಂಚಾಯತ್ ರಾಜ್ಯದ ಅಭಿವೃದ್ಧಿ ಅಧಿಕಾರಿಗಳು , ಶಾಲೆಯ ಮುಖ್ಯ ಗುರುಗಳು , ಸಹಶಿಕ್ಷಕರು , ಗ್ರಂಥಾಲಯ ಶಾಖೆಯ ಮೇಲ್ವಿಚಾರಕರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮವನ್ನು ನಡೆಸಿ ಯಶಸ್ವಿಗೊಳಿಸಿದರು…

ವರದಿ. ಬಸಪ್ಪ ಬಣವಿಕಲ್ಲು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
