;

ಚಿತ್ರದುರ್ಗ ಹೊರವಲಯ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿದೆ….!!!

ಚಿತ್ರದುರ್ಗ ಹೊರವಲಯ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿದೆ. ಏತನ್ಮಧ್ಯೆ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದವರ ಸಂಖ್ಯೆ ನೂರರ ಗಡಿ ದಾಟಿದೆ. ಈ ನಡುವೆ ದುರಂತಕ್ಕೆ ವಿಷಾದ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪೂರ್ಣ ತನಿಖೆಗೆ ಜಿಲ್ಲಾಧಿಕಾರಿಗೆ ಆದೇಶಿಸಿದ್ದಾರೆಚಿತ್ರದುರ್ಗ ತಾಲೂಕಿನ ವಡ್ಡರಸಿದ್ದವ್ವನಹಳ್ಳಿಯ ಪ್ರವೀಣ್‌ (25) ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾನೆ. ವಾರ ಕಾಲ ಕವಾಡಿಗರಹಟ್ಟಿಯ ಸಂಬಂಧಿಕರ ಮನೆಯಲ್ಲಿದ್ದ ಪ್ರವೀಣ್‌ ಎರಡು ದಿನದ ಹಿಂದೆಯಷ್ಟೇ ತಮ್ಮ ಗ್ರಾಮಕ್ಕೆ ತೆರಳಿದ್ದ. ನಂತರ ವಾಂತಿ ಭೇದಿಯಿಂದ ಅಸ್ವಸ್ಥನಾಗಿದ್ದ ಆತ ದಾವಣಗೆರೆ ಆಸ್ಪತ್ರೆಗೆ ದಾಖಲಾಗಿದ್ದು ಬುಧವಾರ ಚಿಕಿತ್ಸೆ ಫಲಿಸದೆ ಅಸುನೀಗಿದ್ದಾನೆ..ಘಟನೆಗೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಅವರು ಪೂರ್ಣ ಮಾಹಿತಿ ಪಡೆದಿದ್ದಾರೆ. ಘಟನೆಗೆ ವಿಷಾದ ವ್ಯಕ್ತಪಡಿಸಿರುವ ಅವರು ಪೂರ್ಣ ಪ್ರಮಾಣದ ತನಿಖೆಗೆ ಸೂಚಿಸಿದ್ದಾರೆ. ತಪ್ಪಿತಸ್ಥರ ಮೇಲೆ ಕ್ರಮಕ್ಕೆ ನಿರ್ದೇಶನ ನೀಡಿದ್ದಾರೆ. ಅಗತ್ಯ ಪರಿಹಾರ ಕೈಗೊಳ್ಳಲು ಸೂಚಿಸಿದ್ದಾರೆಂದು ದಿವ್ಯಾಪ್ರಭು ಹೇಳಿದರು…

ವರದಿ. ಶಶಿಕುಮಾರ್ ಚಳ್ಳಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;