ಕೂಡ್ಲಿಗಿ: ಡಿಪ್ಲೊಮಾ ವಿದ್ಯಾರ್ಥಿನಿಯರ ವಸತಿ ನಿಲಯ ಉದ್ಘಾಟನೆ…!!!

ಕೂಡ್ಲಿಗಿ: ಡಿಪ್ಲೊಮಾ ವಿದ್ಯಾರ್ಥಿನಿಯರ ವಸತಿ ನಿಲಯ ಉದ್ಘಾಟನೆ- ವಿಜಯನಗರ ಜಿಲ್ಲೆ ಕೂಡ್ಲಿಗಿ: ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ, “ಬಾಲಕಿಯರ  ವಿದ್ಯಾರ್ಥಿ ವಸತಿ ನಿಲಯ” ವನ್ನು. ಆ30ರಂದು ಶಾಸಕರಾದ ಡಾ”ಎನ್.ಟಿ.ಶ್ರೀನಿವಾಸ್ ರವರು ಉದ್ಘಾಟಿಸಿದರು, ಅವರು ಮಾತನಾಡಿ , ಕೂಡ್ಲಿಗಿ ಪಾಲಿಟೆಕ್ನಿಕ್  ಕಾಲೇಜು ಹೆಸರು ಉತ್ತಮ ಶ್ರೇಣಿಯಲ್ಲಿದೆ. ಇದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯವಾಗಿದೆ, ಗ್ರಾಮೀಣ ಭಾಗದ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗ ಕಲ್ಪಿಸಲು ದೊಡ್ಡ ಸಂಸ್ಥೆಯಾಗಿ ಬೆಳೆಯಬೇಕು. ವಿದ್ಯಾರ್ಥಿಗಳು ರಾಜ್ಯ ಮತ್ತು ರಾಷ್ಟ್ರಕ್ಕೆ, ಭವಿಷ್ಯತ್ತಿನಲ್ಲಿ ಮಹಾನ್ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು.


ಕಾಲೇಜಿನ ವಿದ್ಯಾರ್ಥಿ ಹಾಗೂ ಪ್ರಾಧ್ಯಾಪಕರ ಬೇಡಿಕೆಗಳು, ಕಾಲೇಜಿನ ಪೀಠೋಪಕರಣಗಳನ್ನು ಒದಗಿಸಲು ಸರಕಾರದ ಮಟ್ಟದಲ್ಲಿ ಚರ್ಚಿಸಲಾಗುವುದು ಎಂದರು. ಪಾಲಿಟೆಕ್ನಿಕ್ ಕಾಲೇಜ್ ವತಿಯಿಂದ, ಶಾಸಕರನ್ನು ಗೌರವಿಸಿ ಸನ್ಮಾನಿಸಲಾಯಿತು. ಶಾಸಕರು ವಸತಿ ನಿಲಯವನ್ನು, ಸಂಪೂರ್ಣವಾಗಿ ಪರಿಶೀಲಿಸಿದರು. ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರು, ಪ್ರಾಧ್ಯಾಪಕರು,ವಿದ್ಯಾರ್ಥಿನಿಯರು,ನಾಗರೀಕರು, ವಿವಿದ ಜನ ಪ್ರತಿನಿಧಿಗಳು, ವಿವಿದ ಇಲಾಖೆಗಳ ಅಧಿಕಾರಿಗಳು. ವಿವಿಧ ಗಣ್ಯಮಾನ್ಯರು ಇದ್ದರು…

ವರದಿ,ವಿ.ಜಿ.ವೃಷಭೇಂದ್ರ ಕೂಡ್ಲಿಗಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend