ಸೆ.8 ರಂದು ಮುನಿರಾಬಾದ್ ನಲ್ಲಿ ಪಕ್ಷಾತಿತವಾಗಿ ನಡೆಯುವ ಹೋರಾಟಕ್ಕೆ ಮಹಿಳಾ ಹೋರಾಟಗಾರರ ಸಂಘಟನೆ ಬೆಂಬಲ : ವಿಜಯರಾಣಿ
ಸಿರಿವಾರ : ತುಂಗಭದ್ರಾ ಜಲಾಶಯಕ್ಕೆ ನೂತನ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯವನ್ನು ತಕ್ಷಣ ಆರಂಭಿಸಬೇಕು ಎಂದು ಒತ್ತಾಯಿಸಿ ಸೆ. 8 ರಂದು ಕೊಪ್ಪಳ ಜಿಲ್ಲೆಯ ಮುನಿರಾಬಾದ್ ನಲ್ಲಿ ರೈತ ಸಂಘಟನೆಯ ನೇತೃತ್ವದಲ್ಲಿ 4 ಜಿಲ್ಲೆಯ ಎಲ್ಲಾ ಮುಖಂಡರಿಂದ ಪಕ್ಷಾತಿತವಾಗಿ ನಡೆಯುವ ಹೋರಾಟಕ್ಕೆ ಮಹಿಳಾ ಹೋರಾಟಗಾರು ಮತ್ತು ಮಹಾಶಕ್ತಿ ಮಹಿಳಾ ಸಬಲೀಕರಣ ಸಂಘದ ಸಂಸ್ಥಾಪಕರು,, ರಾಜ್ಯಾಧ್ಯಕ್ಷರು ಆಗಿರುವ ಶ್ರೀಮತಿ ವಿಜಯರಾಣಿ ಸಿರಿವಾರ ಅವರು ತಿಳಿಸಿದ್ದಾರೆ.
ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಕಿತ್ತು ಹೋಗಿ ಅಪಾರ ಪ್ರಮಾಣದ ನೀರು ನೆರೆಯ ರಾಜ್ಯಕ್ಕೆ ಹರಿದು ಹೋಗಿತ್ತು. ಈಗ ಶಿಥಿಲವಾಗಿರುವ ಗೇಟ್ ಅಳವಡಿಕೆ ಟೆಂಡರ್ ಕರೆಯಲಾಗಿದ್ದು ನಿಧಾನಗತಿಯಿಂದ ಕೆಲಸ ನಡೆಯುತ್ತಿದೆ, ಕಾಮಗಾರಿ ಬೇಗ ಮುಗಿಸಿದರೆ ರೈತರಿಗೆ ಅನುಕೂಲವಾಗಲಿದೆ. ನೀರಾವರಿ ಇಲಾಖೆಯ ಅಧಿಕಾರಿಗಳು ಬೇಸಿಗೆ ಬೆಳೆಗೆ ನೀರಿಲ್ಲ ಎಂದು ಹೇಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಸರ್ಕಾರ ಜಲಾಶಯದಲ್ಲಿ ತುಂಬಿರುವ ಹೂಳು ತೆಗೆಯಲು ಮುಂದಾಗುತ್ತಿಲ್ಲ. ನವಲಿ ಸಮತೋಲನ ಜಲಾಶಯವನ್ನೂ ನಿರ್ಮಾಣ ಮಾಡುತ್ತಿಲ್ಲ. ಸಿಬ್ಬಂದಿ ಕೊರತೆಯಿಂದ ನೀರು ನಿರ್ವಹಣೆಯೂ ಸಮರ್ಪಕವಾಗಿಲ್ಲ ಎಂದು ಸೆ. 8 ರಂದು ರೈತ ಸಂಘಟನೆಯ ನೇತೃತ್ವದಲ್ಲಿ ನಡೆಯುವ ಹೋರಾಟಕ್ಕೆ ನಮ್ಮ ಸಂಘಟನೆಯ ಸಂಪೂರ್ಣ ಬೆಂಬಲ ಇದೆ ಎಂದು ತಿಳಿಸಿದ್ದಾರೆ…

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
