ಅಂಬೇಡ್ಕರ್ ಆದರ್ಶಗಳನ್ನು ಪಾಲಿಸೋಣ…!!!

ಅಂಬೇಡ್ಕರ್ ಆದರ್ಶಗಳನ್ನು ಪಾಲಿಸೋಣ.

ಕೊಟ್ಟೂರು : ಇಡೀ ವಿಶ್ವಕ್ಕೆ ಮಾದರಿ ಸಂವಿಧಾನವನ್ನು ನೀಡಿದ ಕೊಡುಗೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಇವರಿಗೆ ಸಲ್ಲುತ್ತದೆ ಎಂದು ಗ್ರೇಡ್ 2 ತಹಶೀಲ್ದಾರ್ ಎಂ.ಪ್ರತಿಭಾ ಹೇಳಿದರು.

ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಶನಿವಾರ ಏರ್ಪಡಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ರವರ ಮಹಾಪರಿನಿರ್ವಾಣ ದಿನ ಕಾರ್ಯಕ್ರಮದಲ್ಲಿ ಮಾತನಾಡಿ, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ದೊರೆಯುವಂತೆ ಮಾಡಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಇವರ ಆದರ್ಶಗಳನ್ನು ನಾವೆಲ್ಲರು ಅಳವಡಿಸಿಕೊಳ್ಳಬೇಕೆಂದರು.

ಈ ಸಂದರ್ಭದಲ್ಲಿ ಡಿಎಸ್ಎಸ್ ಮುಖಂಡರಾದ ಬದ್ಧಿ ಮರಿಸ್ವಾಮಿ, ಹನುಮಂತಪ್ಪ ವಕೀಲರು, ತೆಗ್ಗಿನಕೆರೆ ಕೊಟ್ರೇಶ್,ಮೈಲಪ್ಪ, ಅಂಬೇಡ್ಕರ್ ಸಂಘದ ತಾಲ್ಲೂಕು ಘಟಕಾಧ್ಯಕ್ಷ ಬದ್ಧಿ ದುರುಗೇಶ್, ಛಲವಾದಿ ಮಹಾಸಭಾದ ತಾಲ್ಲೂಕು ಘಟಕಾಧ್ಯಕ್ಷ ಡಿ.ಮಂಜುನಾಥ್ ಮಾತನಾಡಿದರು. ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಎ.ನಸರುಲ್ಲಾ, ತಾಪಂ. ಸಹಾಯಕ ನಿರ್ದೇಶಕ ಎಚ್.ವಿಜಯ್ ಕುಮಾರ್ ಮುಂತಾದವರಿದ್ದರು.

ಚಿತ್ರ: ಕೊಟ್ಟೂರಿನ ತಾಲ್ಲೂಕು ಕಚೇರಿಯಲ್ಲಿ ಶನಿವಾರ ಡಾ.ಬಿ.ಆರ್.ಅಂಬೇಡ್ಕರ್ ಮಹಾಪರಿನಿರ್ವಾಣ ಕಾರ್ಯಕ್ರಮ ಆಚರಿಸಲಾಯಿತು.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend