ಕೊಳಗಲ್ಲು: ಸರ್ಕಾರಿ ಶಾಲೆ ದತ್ತು ಪಡೆದ ಶಾಸಕ ಬಿ.ನಾಗೇಂದ್ರ ಮಾದರಿ ಶಾಲೆಯಾಗಿ ಅಭಿವೃದ್ಧಿಪಡಿಸಲು ಪಣ….!!!!

ಕೊಳಗಲ್ಲು: ಸರ್ಕಾರಿ ಶಾಲೆ ದತ್ತು ಪಡೆದ ಶಾಸಕ ಬಿ.ನಾಗೇಂದ್ರ
ಮಾದರಿ ಶಾಲೆಯಾಗಿ ಅಭಿವೃದ್ಧಿಪಡಿಸಲು ಪಣ
ಬಳ್ಳಾರಿ:
ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಶಕ್ತಿ ತುಂಬುವ ಉದ್ದೇಶದಿಂದ ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಅವರು ಬಳ್ಳಾರಿ ತಾಲ್ಲೂಕಿನ ಕೊಳಗಲ್ಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮಾ.02 ರಂದು ದತ್ತು ಪಡೆದಿದ್ದಾರೆ.
ಕ್ಷೇತ್ರದ ಈ ಶಾಲೆಯನ್ನು ಎಲ್ಲಾ ಆಯಾಮಗಳಲ್ಲಿ ಅಭಿವೃದ್ಧಿಪಡಿಸಿ, ಬಳ್ಳಾರಿ ಗ್ರಾಮಾಂತರ ಭಾಗದಲ್ಲೇ ಒಂದು ಮಾದರಿ ಶಾಲೆಯನ್ನಾಗಿ ಮಾಡಲಾಗುವುದು. ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಶೈಕ್ಷಣಿಕ ಪ್ರಗತಿಯನ್ನು ಹೆಚ್ಚಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಶಾಲೆಯ ಸಮಗ್ರ ವಿಕಾಸಕ್ಕೆ ಅಗತ್ಯವಿರುವ ಅನುದಾನವನ್ನು ಒದಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಶಾಲೆಯಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಹಾಗೂ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವುದು ಈ ದತ್ತು ಯೋಜನೆಯ ಮುಖ್ಯ ಉದ್ದೇಶವಾಗಿದೆ.
ಶಾಸಕರ ಈ ನಡೆಯನ್ನು ಶಾಲೆಯ ಪ್ರಭಾರಿ ಮುಖ್ಯ ಗುರುಗಳು ಹಾಗೂ ಶಿಕ್ಷಕ ವೃಂದದವರು ಮುಕ್ತ ಕಂಠದಿAದ ಶ್ಲಾಘಿಸಿದ್ದಾರೆ. ಈ ಅಭಿವೃದ್ಧಿ ಕಾರ್ಯದಿಂದಾಗಿ ನಮ್ಮ ಶಾಲೆ ಉತ್ತಮ ಶಾಲೆಯಾಗಿ ಹೊರಹೊಮ್ಮಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶಾಸಕರ ಕಾಳಜಿಯು ಇಡೀ ಸಮಾಜದ ಗಮನ ಸೆಳೆಯುವಂತಿದೆ. ಬಳ್ಳಾರಿ ಗ್ರಾಮಾಂತರ ಭಾಗದಲ್ಲಿ ಶಾಸಕರೊಬ್ಬರು ಈ ರೀತಿ ಶಾಲೆಯನ್ನು ದತ್ತು ಪಡೆಯುತ್ತಿರುವುದು ಇದೇ ಮೊದಲು ಎಂದು ಶಾಲಾ ಆಡಳಿತ ಮಂಡಳಿ ಹರ್ಷ ವ್ಯಕ್ತಪಡಿಸಿದೆ.

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend