ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಡಾ. ಆಕಾಶ್ ಎಸ್ ಅವರು ಹೊಳಲ್ಕೆರೆ ತಾಲ್ಲೂಕಿನ ಟಿ. ನುಲೆನೂರು, ತಾಳಿಕಟ್ಟೆ, ತುಪ್ಪದಹಳ್ಳಿ ಮತ್ತು ಎನ್. ಜಿ. ಹಳ್ಳಿ ಗ್ರಾಮ ಪಂಚಾಯಿತಿಗಳಿಗೆ …

 

ಗುರುವಾರ ದಂದು (ದಿನಾಂಕ. 23/04/2026) ದಿಢೀರ್ ಭೇಟಿ ನೀಡಿ ವಿವಿಧ ಕಾರ್ಯಗಳನ್ನು ಪರಿಶೀಲಿಸಿದರು.

 

ಗ್ರಾಮ ಪಂಚಾಯಿತಿ ಕಚೇರಿಯ ಕಡತಗಳನ್ನು ಪರಿಶೀಲಿಸಿದ ಅವರು, ಕಚೇರಿ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವಂತೆ ಮತ್ತು ಶೌಚಾಲಯಗಳನ್ನು ಸ್ವಚ್ಚವಾಗಿ ಇಟ್ಟು ಕೊಳ್ಳುವಂತೆ ಗ್ರಾಮ ಪಂಚಾಯತಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

 

ಬಳಿಕ ಗ್ರಾಮ ಪಂಚಾಯಿತಿಗಳ ಗ್ರಂಥಾಲಯಕ್ಕೆ ಭೇಟಿ ನೀಡಿ ಅದರ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದರು.

 

ಕಂದಾಯ ವಸೂಲಾತಿ ವಿಷಯವಾಗಿ ಪಂಚಾಯಿತಿ ಪಿಡಿಒ ಹಾಗೂ ಸಿಬ್ಬಂದಿಗಳೊಂದಿಗೆ ಚರ್ಚಿಸಿ ಪ್ರಗತಿ ಕುರಿತು ವಿವರಗಳನ್ನು ಪಡೆದುಕೊಂಡರು.

 

ಗ್ರಾಮಗಳಲ್ಲಿನ ಕುಡಿಯುವ ನೀರಿನ ಸಮಸ್ಯೆಯ ಕುರಿತು ಸಾರ್ವಜನಿಕರೊಂದಿಗೆ ವಿಚಾರಿಸಿದ ಅವರು, ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಇ ಒ ಹಾಗೂ ಎಇಇ, ಜೆ. ಇ ಮತ್ತು ಎ ಇ ಅವರುಗಳಿಗೆ ಸೂಚಿಸಿದರು.

 

ಈ ಸಂದರ್ಭದಲ್ಲಿ ಹೊಳಲ್ಕೆರೆ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು ಕುಡಿಯುವ ನೀರಿನ ಎಇಇ,ಜೆ ಇ, ಎ ಇ, ಪಿಡಿಒರವರುಗಳು ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend