ಜಿಲ್ಲಾಧಿಕಾರಿಗಳು ಸಿಂಧನೂರು ತಾಲ್ಲೂಕಿಗೆ ಭೇಟಿ…!!!

ಜಿಲ್ಲಾಧಿಕಾರಿಗಳು ಸಿಂಧನೂರು ತಾಲ್ಲೂಕಿಗೆ ಭೇಟಿ ನೀಡಿ ವಿವಿಧ ಸಾರ್ವಜನಿಕ ಸೇವಾ ಕೇಂದ್ರಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಅವರು ತಾಲ್ಲೂಕು ಆಸ್ಪತ್ರೆಯನ್ನು ಭೇಟಿ ನೀಡಿ ರೋಗಿಗಳಿಗೆ ಒದಗಿಸಲಾಗುತ್ತಿರುವ ಆರೋಗ್ಯ ಸೇವೆಗಳು, ವೈದ್ಯಕೀಯ ಸೌಲಭ್ಯಗಳು, ಔಷಧಿಗಳ ಲಭ್ಯತೆ ಹಾಗೂ ಆಸ್ಪತ್ರೆಯ ಸ್ವಚ್ಛತಾ ವ್ಯವಸ್ಥೆಯನ್ನು ಪರಿಶೀಲಿಸಿದರು. ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಸಮಯಕ್ಕೆ ಸರಿಯಾಗಿ ಒದಗಿಸಲು ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.

ನಂತರ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿ ಆಹಾರದ ಗುಣಮಟ್ಟ, ಸ್ವಚ್ಛತೆ, ಫಲಾನುಭವಿಗಳಿಗೆ ನೀಡಲಾಗುತ್ತಿರುವ ಸೇವೆಗಳ ಕುರಿತು ಪರಿಶೀಲನೆ ನಡೆಸಿದರು. ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನಿಯಮಾನುಸಾರ ಒದಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ರಸಗೊಬ್ಬರ ಅಂಗಡಿಗಳ ಪರಿಶೀಲನೆ ವೇಳೆ ರೈತರಿಗೆ ಅಗತ್ಯ ಪ್ರಮಾಣದಲ್ಲಿ ರಸಗೊಬ್ಬರಗಳ ಲಭ್ಯತೆ, ದಾಸ್ತಾನು ಸ್ಥಿತಿ ಹಾಗೂ ಮಾರಾಟ ವ್ಯವಸ್ಥೆಯ ಕುರಿತು ಮಾಹಿತಿ ಪಡೆದು, ಯಾವುದೇ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಅಲ್ಲದೆ, ತುರ್ವಿಹಾಳ ಕೆರೆಗೆ ಭೇಟಿ ನೀಡಿ ಕೆರೆಯ ಅಭಿವೃದ್ಧಿ, ನೀರಿನ ಸಂಗ್ರಹಣೆ ಹಾಗೂ ನಿರ್ವಹಣಾ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು ಮತ್ತು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶಿಸಿದರು.

ಬಳಿಕ ನಗರಸಭೆ (CMC), ಕಂದಾಯ ಇಲಾಖೆ ಸೇರಿದಂತೆ ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಿವಿಧ ಇಲಾಖೆಗಳ ಪ್ರಗತಿ, ಸಾರ್ವಜನಿಕ ಸಮಸ್ಯೆಗಳ ಪರಿಹಾರ, ಸರ್ಕಾರದ ಯೋಜನೆಗಳ ಅನುಷ್ಠಾನ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿದರು. ಜನಸಾಮಾನ್ಯರಿಗೆ ಪರಿಣಾಮಕಾರಿ ಹಾಗೂ ಪಾರದರ್ಶಕ ಆಡಳಿತ ಸೇವೆಗಳನ್ನು ಒದಗಿಸಲು ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಸೂಚಿಸಿದರು.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend