ಕರ್ನಾಟಕದಲ್ಲಿ, ಮದ್ಯಪಾನ ಮಾಡಲು ಮತ್ತು ಖರೀದಿಸಲು ಕಾನೂನುಬದ್ಧ ವಯಸ್ಸು 21 ವರ್ಷಗಳು…!!!

ಕರ್ನಾಟಕದಲ್ಲಿ, ಮದ್ಯಪಾನ ಮಾಡಲು ಮತ್ತು ಖರೀದಿಸಲು ಕಾನೂನುಬದ್ಧ ವಯಸ್ಸು 21 ವರ್ಷಗಳು.

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ ಪಡೆದ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.

ಈ ಅಧಿಸೂಚನೆಯ ಉದ್ದೇಶ ಅಪ್ರಾಪ್ತ ವಯಸ್ಸಿನವರು ಮದ್ಯಪಾನ ಮಾಡುವುದನ್ನು ತಡೆಯುವುದು, ಯುವಜನರನ್ನು ಇಂತಹ ದುಶ್ಚಟಗಳಿಂದ ರಕ್ಷಿಸುವುದು ಮತ್ತು ರಾಜ್ಯದಲ್ಲಿ ಜವಾಬ್ದಾರಿಯುತ ಮದ್ಯ ಮಾರಾಟ ಹಾಗೂ ಸೇವನೆಯ ಗುರಿಯನ್ನು ಹೊಂದಿದೆ.

ಮದ್ಯ ಮಾರಾಟ ಮಾಡುವ ಸಂಸ್ಥೆಗಳು ಪ್ರತಿಯೊಬ್ಬರ ಗುರುತಿನ ಚೀಟಿ (ID) ಪರಿಶೀಲಿಸಿ ಸಂಗ್ರಹಿಸಬೇಕೆಂಬ ನಿಯಮ ಇಲ್ಲ. ಆದರೆ 21 ವರ್ಷಕ್ಕಿಂತ ಕಡಿಮೆ ವಯಸ್ಸಿನಂತೆ ಕಾಣುವವರ ಗುರುತಿನ ಚೀಟಿ ಪರಿಶೀಲಿಸಿ, ಅವರು ವಯಸ್ಕರೊಂದಿಗೆ ಬಂದಿದ್ದರೂ ಮದ್ಯ ಸೇವನೆಗೆ ಅವಕಾಶ ನೀಡಬಾರದು.

ತಮ್ಮ ಮಾರಾಟ ಮತ್ತು ಸೇವನೆಯ ಸ್ಥಳದಲ್ಲಿ ಹದಿಹರೆಯದವರು ಮದ್ಯಪಾನ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಸಂಸ್ಥೆಗಳು ಖಚಿತಪಡಿಸಿಕೊಳ್ಳಬೇಕು. ಯಾವುದೇ ನಿರ್ಲಕ್ಷ್ಯ ಕಂಡುಬಂದರೆ ಗಂಭೀರ ಕ್ರಮ ಎದುರಿಸಬೇಕಾಗುತ್ತದೆ.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend