;

ರೌಡಿಗಳಿಗೆ ಖಾಕಿ ಖಡಕ್ ಎಚ್ಚರಿಕೆ… ಅಪರಾಧ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಪೊಲೀಸ್ ಪಡೆಗಳ ಬಿಗಿ ಕಾರ್ಯಾಚರಣೆ!”

ರೌಡಿಗಳಿಗೆ ಖಾಕಿ ಖಡಕ್ ಎಚ್ಚರಿಕೆ… ಅಪರಾಧ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಪೊಲೀಸ್ ಪಡೆಗಳ ಬಿಗಿ ಕಾರ್ಯಾಚರಣೆ!”

ಬೆಳ್ಳಂಬೆಳಗ್ಗೆ ರೌಡಿಗಳಿಗೆ ಪೊಲೀಸರ ಶಾಕ್..! 97 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ..

ರಾಜಧಾನಿ ಬೆಂಗಳೂರಿನಲ್ಲಿ ರೌಡಿಗಳಿಗೆ ಪೊಲೀಸರು ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದಾರೆ. ಬೆಂಗಳೂರು ಉತ್ತರ ವಿಭಾಗದ 13 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ರೌಡಿ ನಿಗ್ರಹ ಪಡೆಗಳು ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿ 97 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿವೆ. ಕಾರ್ಯಾಚರಣೆ ವೇಳೆ ರೌಡಿಶೀಟರ್‌ಗಳ ವಿರುದ್ಧ ಈ ಹಿಂದೆ ದಾಖಲಾಗಿರುವ ಪ್ರಕರಣಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಯಿತು. ಅಲ್ಲದೆ, ಅವರ ವಿರುದ್ಧ ಬಾಕಿ ಇರುವ ವಾರೆಂಟ್, ಪ್ರೊಕ್ಲಮೇಷನ್ ಹಾಗೂ ಎಲ್‌ಪಿಆರ್ ಪ್ರಕರಣಗಳ ಪರಿಶೀಲನೆಯೂ ನಡೆಯಿತು. ನ್ಯಾಯಾಲಯದ ವಿಚಾರಣೆಗೆ ತಪ್ಪದೇ ಹಾಜರಾಗುವಂತೆ ರೌಡಿಶೀಟರ್‌ಗಳಿಗೆ ಪೊಲೀಸರು ಸೂಚನೆ ನೀಡಿದ್ದು, ಮುಂದಿನ ದಿನಗಳಲ್ಲಿ ಯಾವುದೇ ಕಾನೂನುಬಾಹಿರ ಚಟುವಟಿಕೆ ಅಥವಾ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು ಉತ್ತರ ವಿಭಾಗದ ಡಿಸಿಪಿ ಬಿ.ಎಸ್. ನೇಮಗೌಡ ಅವರ ನೇತೃತ್ವದಲ್ಲಿ ನಡೆದ ಈ ವಿಶೇಷ ಕಾರ್ಯಾಚರಣೆ, ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ರೌಡಿಗಳ ಮೇಲೆ ನಿಗಾ ಬಿಗಿಗೊಳಿಸುವ ಉದ್ದೇಶದಿಂದ ಕೈಗೊಳ್ಳಲಾಗಿದೆ.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;