ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ: ಚಿತ್ರದುರ್ಗ ತಾಲ್ಲೂಕು ವಾಣಿಜ್ಯ ಮತ್ತು ಕೈಗಾರಿಕಾ ಘಟಕದ ಅಧ್ಯಕ್ಷರಾಗಿ ಪ್ರಸನ್ನ ಡಿ.ಎಂ. ಆಯ್ಕೆ
ಚಿತ್ರದುರ್ಗ 28: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಚಿತ್ರದುರ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಘಟಕದ ವತಿಯಿಂದ ಚಿತ್ರದುರ್ಗ ತಾಲ್ಲೂಕು ಘಟಕವನ್ನು ಯಶಸ್ವಿಯಾಗಿ ರಚಿಸಲಾಗಿದ್ದು, ನೂತನ ತಾಲ್ಲೂಕು ಅಧ್ಯಕ್ಷರಾಗಿ ಶ್ರೀಯುತ ಪ್ರಸನ್ನ ಡಿ.ಎಂ. ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ತಾಲ್ಲೂಕು ಘಟಕವು ರಚನೆಯಾದಾಗಿನಿಂದಲೂ ಅತ್ಯಂತ ಯಶಸ್ವಿಯಾಗಿ ಮತ್ತು ನಿರಂತರವಾಗಿ ಮಾಸಿಕ ಸಭೆಗಳನ್ನು ಆಯೋಜಿಸಿಕೊಂಡು ಬರುತ್ತಿರುವುದು ಶ್ಲಾಘನೀಯವಾಗಿದೆ.
ಈ ಯಶಸ್ವಿ ಸಂಘಟನೆ ಮತ್ತು ಘಟಕದ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಚಿತ್ರದುರ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಘಟಕದ ಅಧ್ಯಕ್ಷರಾದ ಶ್ರೀ ಆನಂದ್, ಚಿತ್ರದುರ್ಗ ಜಿಲ್ಲಾ ಮಹಾಸಭೆಯ ಅಧ್ಯಕ್ಷರಾದ ಶ್ರೀ ಮಹಡಿ ಶಿವಮೂರ್ತಿ, ಜಿಲ್ಲಾ ಹಾಗೂ ತಾಲ್ಲೂಕಿನ ಎಲ್ಲಾ ಘಟಕಗಳ ಪದಾಧಿಕಾರಿಗಳು, ಅಧ್ಯಕ್ಷರುಗಳು ಮತ್ತು ಸಮಾಜದ ಬಂಧುಗಳು ಸಕ್ರಿಯವಾಗಿ ಭಾಗವಹಿಸಿ ಒಗ್ಗಟ್ಟನ್ನು ಪ್ರದರ್ಶಿಸಿದ್ದಾರೆ.
ತಾಲ್ಲೂಕು ಘಟಕದ ಈ ನಿರಂತರ ಸಕ್ರಿಯತೆ ಮತ್ತು ಯಶಸ್ವಿ ಕಾರ್ಯವೈಖರಿಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಕೈಗಾರಿಕಾ ಮತ್ತು ವಾಣಿಜ್ಯ ಘಟಕದ ರಾಜ್ಯಾಧ್ಯಕ್ಷರಾದ ಶ್ರೀ ವಿಜಯಕುಮಾರ ಪಿ. ಪಾಟೀಲ್ ಅವರು ತಮ್ಮ ಹೃತ್ಪೂರ್ವಕ ಅಭಿನಂದನೆಗಳು ಹಾಗೂ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸಿದ್ದಾರೆ. ಮುಂಬರುವ ದಿನಗಳಲ್ಲೂ ಘಟಕವು ಸಮಾಜದ ವಾಣಿಜ್ಯ ಮತ್ತು ಕೈಗಾರಿಕಾ ರಂಗದ ಪ್ರಗತಿಗೆ ಮತ್ತಷ್ಟು ಕೊಡುಗೆ ನೀಡಲಿ ಎಂದು ಅವರು ಆಶಿಸಿದ್ದಾರೆ.
ವಿನಾಯಕ ಆರ್ ಜಿ ವರದಿಗಾರರು ಚಿತ್ರದುರ್ಗ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
