;

ಡ್ರೈನೇಜ್ ಇಲ್ಲದೆ ರಸ್ತೆಯಲ್ಲೇ ಮಳೆ ನೀರು: ವಾಹನ ಸವಾರರ ಪರದಾಟ…!!!

ಡ್ರೈನೇಜ್ ಇಲ್ಲದೆ ರಸ್ತೆಯಲ್ಲೇ ಮಳೆ ನೀರು: ವಾಹನ ಸವಾರರ ಪರದಾಟ
ಯಾದಗಿರಿ, ಆ.02: ಯಾದಗಿರಿ ನಗರದ ನೇತಾಜಿ ಸುಭಾಷ್ ಚಂದ್ರ ಬೋಸ್ ಸರ್ಕಲ್‌ನಿಂದ ಕಲಬುರಗಿ ಕಡೆಗೆ ಸಾಗುವ ಮುಖ್ಯ ರಸ್ತೆಯಲ್ಲಿರುವ ರಿಲಯನ್ಸ್ ಟ್ರೆಂಡ್ಸ್ ಮುಂಭಾಗದಲ್ಲಿ ಸಮರ್ಪಕ ಡ್ರೈನೇಜ್ ವ್ಯವಸ್ಥೆ ಇಲ್ಲದ ಕಾರಣ ಮಳೆ ನೀರು ರಸ್ತೆಯ ಮೇಲೆಯೇ ನಿಂತು ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿದೆ.
ಪ್ರತಿ ಬಾರಿ ಮಳೆಯಾದಾಗ ಇದೇ ಸಮಸ್ಯೆ ಎದುರಾಗುತ್ತಿದ್ದು, ರಸ್ತೆಯಲ್ಲಿ ನೀರು ನಿಲ್ಲುವುದರಿಂದ ವಾಹನ ಸವಾರರು ಹಾಗೂ ಪಾದಚಾರಿಗಳು ಪರದಾಡುವಂತಾಗಿದೆ. ಅಲ್ಲದೆ, ನೀರು ನಿಂತಿರುವ ಕಾರಣ ರಸ್ತೆಯ ಗುಂಡಿಗಳು ಕಾಣಿಸದಿದ್ದು, ಅಪಘಾತ ಸಂಭವಿಸುವ ಭೀತಿಯೂ ಎದುರಾಗಿದೆ.
ಸಂಬಂಧಪಟ್ಟ ನಗರಸಭೆ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮರ್ಪಕ ಚರಂಡಿ ನಿರ್ಮಿಸಿ, ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಶಾಶ್ವತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;